Featured

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ  ನೇಮಕ  – Vishwnaews24

ರಾಷ್ಟ್ರಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಸಂಘಟಿತನಾಗಿ ಶ್ರಮಿಸುತ್ತೇನೆ..

ಕಾಂಗ್ರೆಸ್‌  ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ನನ್ನೆಲ್ಲಾ ಶ್ರಮ ಹಾಕಿ ಕೆಲಸ ಮಾಡುತ್ತೇನೆ..

ಯುವ ಕಾಂಗ್ರೆಸ್‌ ಬಲವರ್ಧನೆ ಮತ್ತು ಯುವಕರ ಧ್ವನಿಯಾಗಿ ಪಕ್ಷನಿಷ್ಠನಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ..

ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.

ರಕ್ಷಾ ರಾಮಯ್ಯ ಅವರು ಭಾರತೀಯ ಯುವ ಕಾಂಗ್ರೆಸ್‌ಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಭಡ್ತಿ ನೀಡಲಾಗುತ್ತಿದೆ. ನೇಮಕಾತಿಯು ತತ್‌ಕ್ಷಣ ಜಾರಿಗೆ ಬರಲಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.

ಪಕ್ಷ ಸಂಘಟನೆಗಾಗಿ ಪೂರ್ಣ ಸಮಯ ಮತ್ತು ಶಕ್ತಿಯನ್ನು ಉಪಯೋಗಿಸುವುದರೊಂದಿಗೆ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಪಕ್ಷ ಬಲವರ್ಧನೆಯಲ್ಲಿ ಸದಾ ನಮ್ಮೊಂದಿಗೆ ಶ್ರಮಿಸುತ್ತೀರಿ ಎಂಬ ನಂಬಿಕೆಯನ್ನು ಹೊಂದಿದ್ದೇವೆ ಎಂದು ಅವರು ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.

ಹೊಸ ಜವಾಬ್ದಾರಿಯು ಕುರಿತು ಪ್ರತಿಕ್ರಿಯಿಸಿದ ರಕ್ಷಾ ರಾಮಯ್ಯ, ಪಕ್ಷ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸಲು ಖುಷಿಯಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಸಂಘಟಿತನಾಗಿ ಶ್ರಮಿಸುತ್ತೇನೆ. ಉದಯಪುರದಲ್ಲಿ ನಡೆದ ಕಾಂಗ್ರೆಸ್‌ ಚಿಂತನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ನನ್ನೆಲ್ಲಾ ಶ್ರಮ ಹಾಕಿ ಕೆಲಸ ಮಾಡುತ್ತೇನೆ. ಯುವ ಕಾಂಗ್ರೆಸ್‌ ಬಲವರ್ಧನೆ ಮತ್ತು ಯುವಕರ ಧ್ವನಿಯಾಗಿ ಪಕ್ಷನಿಷ್ಠನಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago