Featured

ಭಾರತೀಯ ರಾಜಕಾರಣದಲ್ಲಿನ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ, ಅವರೊಂದಿಗೆ ಕಾರ್ಯನಿರ್ವಹಿಸಿದ್ದ 5 ವರ್ಷದ ಅವಧಿ ಸ್ಮರಣೀಯ : ಪ್ರಧಾನಿ ಮೋದಿ -Vishwanews24

ನವದೆಹಲಿ,: ಭಾರತೀಯ ರಾಜಕಾರಣದಲ್ಲಿನ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

“ಸುಷ್ಮಾ ಸ್ವರಾಜ್ ಕೋಟ್ಯಾಂತರ ಜನರಿಗೆ ಸ್ಫೂರ್ತಿಯ ಮೂಲವಾಗಿದ್ದರು. ಸುಷ್ಮಾ ಅವರು ಅತ್ಯುತ್ತಮ ಸಂಸದೆಯಾಗಿದ್ದರು. ಕೇವಲ ಅವರು ಪಕ್ಷ ಮಾತ್ರವಲ್ಲ, ಅದರ ಆಚೆಗೂ ಸಹ ಮೆಚ್ಚುಗೆ ಪಡೆದವರು ಮತ್ತು ಗೌರವಿಸಲ್ಪಟ್ಟವರು. ಬಿಜೆಪಿಯ ಸಿದ್ಧಾಂತ ಮತ್ತು ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ಅವರು ರಾಜಿಯಾಗುತ್ತಿರಲಿಲ್ಲ. ಪಕ್ಷದ ಬೆಳವಣಿಗೆಗೆ ಅವರ ಕೊಡುಗೆ ಅಪಾರವಾದದ್ದು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅಪ್ರತಿಮ ಸಂಸದೀಯ ಪಟುವಾಗಿದ್ದ ಸುಷ್ಮಾ ಅವರು, ಸರ್ಕಾರದ ಸಚಿವರಾಗಿ ಭಾರತದ ಸಂಬಂಧಗಳನ್ನು ಇತರೇ ದೇಶಗಳೊಂದಿಗೆ ಉತ್ತಮವಾಗಿಸಲು ಕಾರ್ಯನಿರ್ವಹಿಸಿದ್ದರು. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಅವರೊಂದಿಗೆ ಕಾರ್ಯನಿರ್ವಹಿಸಿದ್ದ 5 ವರ್ಷದ ಅವಧಿ ಸ್ಮರಣೀಯವಾಗಿದ್ದು, ಅವರು ಅನಾರೋಗ್ಯದಿಂದಿದ್ದರೂ ಕೂಡ, ತಮ್ಮ ಕಾರ್ಯವನ್ನು ದೇಶಕ್ಕಾಗಿ ಮಾಡುತ್ತಿದ್ದರು ಎಂದು ಪ್ರಧಾನಿ ಮೋದಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ಸುಷ್ಮಾ ಅತ್ಯುತ್ತಮ ಆಡಳಿತಾಧಿಕಾರಿ. ಅವರು ನಿರ್ವಹಿಸಿದ ಪ್ರತಿಯೊಂದು ಜವಾಬ್ದಾರಿಯೂ ಉನ್ನತ ಗುಣಮಟ್ಟದ್ದಾಗಿತ್ತು. ಹಾಗೂ ಅವರು ಅದರಲ್ಲಿ ಅತ್ಯಂತ ಕಾಳಜಿಯನ್ನು, ಶ್ರದ್ದೆಯನ್ನೂ ಹೊಂದಿದ್ದರು. ವಿವಿಧ ರಾಷ್ಟ್ರಗಳೊಂದಿಗಿನ ಭಾರತ ಸಂಬಂಧಗಳನ್ನು ಉತ್ತಮಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಚಿವರಾಗಿ ನಾವು ಆಕೆಯ ಸಹಾನುಭೂತಿಯ ಮುಖವನ್ನು ಕಂಡಿದ್ದೇವೆ. ವಿಶ್ವದ ಯಾವುದೇ ಭಾಗದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಪಾಲಿಗೆ ಸುಷ್ಮಾ ಅವರು ಸಹಾಯ ನೀಡದಿರುತ್ತಿರಲಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago