ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ ಜಸ್ಪಾಲ್ ರಾಣಾ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು.
ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ಹಿಂದಿರುಗುವಾಗ ಅನಾರೋಗ್ಯಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.
ನವದೆಹಲಿಗೆ ಬಂದಿಳಿದ ನಂತರ, ಅವರನ್ನು ಸಾಕೇತ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು, ವೈದ್ಯರು ಅವರನ್ನು ಪರೀಕ್ಷಿಸಿದ ನಂತರ, ಹೃದಯಾಘಾತವನ್ನು ನಿವಾರಿಸಲು ಸ್ಟೆಂಟ್ ಅಳವಡಿಸಿದ್ದರು. ಕೆಲವು ದಿನಗಳ ನಂತರ ಎರಡನೇ ಸ್ಟೆಂಟ್ ಶಸ್ತ್ರಚಿಕಿತ್ಸೆಯನ್ನು ನಡೆಸುವ ನಿರೀಕ್ಷೆಯಿತ್ತು.
ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವಾಗಲೇ ಅವರ ಸಾವಿನ ಸುದ್ದಿ ಹೊರಬಿದ್ದಿದೆ, ಅವರು ನಿಧನರಾಗಿದ್ದಾರೆ ಎಂದುರ ಭಾರತೀಯ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ (NRAI) ದೃಢಪಡಿಸಿತು.
ಅವರ ಸಾವು ಭಾರತೀಯ ಶೂಟಿಂಗ್‌ಗೆ ಭರಿಸಲಾಗದ ನಷ್ಟವಾಗಿದೆ. ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಚಾಂಪಿಯನ್ ಕ್ರೀಡಾಪಟು ಮತ್ತು ತರಬೇತುದಾರರಾಗಿದ್ದರು. ರಾಣಾ ಹಲವಾರು ವರ್ಷಗಳ ಕಾಲ ಭಾರತವನ್ನು ವಿಶಿಷ್ಟವಾಗಿ ಪ್ರತಿನಿಧಿಸಿದರು ಮತ್ತು ದೇಶದಲ್ಲಿ ಕ್ರೀಡೆ ಇನ್ನೂ ಅಭಿವೃದ್ಧಿ ಹೊಂದುತ್ತಿರುವ ಸಮಯದಲ್ಲಿ ಶೂಟಿಂಗ್ ಅನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…