ಮಂಗಳೂರು : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದೆ ಆ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆನೀಡಿದ್ದು ಮಂಗಳೂರು, ಉಡುಪಿಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ.
ಈಗಾಗಲೇ ಈ ಬಂದ್ ಹಿನ್ನಲೆಯಲ್ಲಿ ಮಾತನಾಡಿದ ಎಡಪಕ್ಷಗಳ ಮುಖಂಡರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿದೆ. ಪ್ರಸ್ತುತ ಪರಿಸ್ಥಿತಿ ಸರಿಯಿಲ್ಲದ ಹಿನ್ನಲೆಯಲ್ಲಿ ಬಂದ್‌ಗೆ ಕರೆ ನೀಡುವುದಿಲ್ಲ” ಎಂದು ತಿಳಿಸಿದ್ದರು.
ಕಾಸರಗೋಡಿನಲ್ಲಿ ಬಂದ್‌ನ ಪರಿಣಾಮ ಉಂಟಾಗಿದ್ದು ಶಾಲಾ ಕಾಲೇಜುಗಳು, ಹೊಟೇಲ್‌ಗಳು, ಪೆಟ್ರೋಲ್ ಬಂಕ್‌ಗಳು ಇತರೆ ಅಂಗಡಿ ಮುಗ್ಗಟ್ಟುಗಳು ತೆರೆದಿಲ್ಲ. ಬಸ್ ಸಂಚಾರದಲ್ಲೂ ವ್ಯತ್ಯಯ ಕಂಡುಬಂದಿದೆ.
ಮಂಗಳೂರು ಹಾಗೂ ಉಡುಪಿಯಲ್ಲಿ ಬಂದ್‌ನಿಂದಾಗಿ ಯಾವುದೇ ವ್ಯತ್ಯಯವಾಗಿಲ್ಲ. ಶಾಲಾ ಕಾಲೇಜುಗಳು ಹಾಗೂ ಇತರೆ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದೆ. ಹಾಗೆಯೇ ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…