Featured

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ : ಮಯೂರ್‌ ಜಯಕುಮಾರ್‌ – Vishwanews24

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿ ಯಾತ್ರೆಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ

ಹರಿಹರ  : ಮಹಾತ್ಮ ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ಐಕ್ಯತಾ ಯಾತ್ರೆಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಮಯೂರ್‌ ಜಯಕುಮಾರ್‌ ಹೇಳಿದ್ದಾರೆ.

ನಗರದ ಎಚ್‌.ಕೆ.ವೀರಪ್ಪ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಹುಲ್‌ಗಾಂಧಿ 3,570 ಕಿಮೀ ದೂರ ಭಾರತ್‌ ಜೋಡೋ ಪಾದಯಾತ್ರೆ ಮಾಡುತ್ತಿದ್ದು, ಅ.12ಕ್ಕೆ ದಾವಣಗೆರೆಗೆ ಆಗಮಿಸಲಿದೆ. ಪಾದಯಾತ್ರೆಗೆ ಸಂಪೂರ್ಣ ಸಹಕಾರ ನೀಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶಾಸಕ ಎಸ್‌.ರಾಮಪ್ಪ ಮಾತನಾಡಿ, ರಾಹುಲ್‌ ಗಾಂಧಿಯವರು ಕಾಂಗ್ರೆಸ್‌ನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅಭೂತಪೂರ್ವ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಿ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ? ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌

ಮುಖಂಡ ಎನ್‌.ಎಚ್‌.ಶ್ರೀನಿವಾಸ್‌ ನಂದಿಗಾವಿ, ಆಡಳಿತದಲ್ಲಿರುವ ಬಿಜೆಪಿ ಪರಿಶಿಷ್ಟಜಾತಿ ಮತ್ತು ವರ್ಗ ಹಾಗೂ ಹಿಂದುಳಿದವರ ಕಾಳಜಿ ಮರೆತಿದೆ. ಇದು 40 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಮುಂದೆ ಇದು 50 ಪರ್ಸೆಂಟ್‌ ಆಗುವ ಸಾಧ್ಯತೆ ಇದ್ದು, ಜನರು ಈ ಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರ ಕೈಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕು ಎಂದು ಹೇಳಿದರು. ದೇವೇಂದ್ರಪ್ಪ ಕುಣೆಬೆಳೆಕೆರೆ ಮಾತನಾಡಿ, ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಜಿಲ್ಲಾ ವಕ್ತಾರರಾದ ಎಂ.ನಾಗೇಂದ್ರಪ್ಪ, ಬಿಜೆಪಿ ಕೆಟ್ಟಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರದಿಂದ ನಮ್ಮ ನಾಯಕ ರಾಹುಲ್‌ ಗಾಂಧಿ 3570 ಕಿಲೋಮೀಟರ್‌ ಐಕ್ಯತಾ ಪಾದ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24

ಪಕ್ಷದ ವೀಕ್ಷಕರಾದ ಕವಿತಾ ರೆಡ್ಡಿ, ಅಮೃತೇಶ ಸ್ವಾಮಿ, ವಿಜಯಕುಮಾರ್‌, ಬಿ. ರೇವಣಸಿದ್ದಪ್ಪ, ಎ.ಗೋವಿಂದರೆಡ್ಡಿ, ಕುಂಬಳೂರು ವಿರೂಪಾಕ್ಷಪ್ಪ, ನಗರಸಭೆ ಸದಸ್ಯರಾದ ಶಂಕರ್‌ ಕಟಾವ್ಕರ್‌, ಎಂ.ಎಸ್‌. ಬಾಬುಲಾಲ್‌, ಅಬ್ದುಲ್‌ ಅಲೀಮ್‌, ದಾದಾಪೀರ್‌, ಅಶೋಕ್‌ ಮಾಸ್ಟರ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ನಿಖಿಲ್‌ ಕೊಂಡಜ್ಜಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Vishwa News 24

Recent Posts

ಕಾನೂನುಬದ್ಧ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸೂಕ್ತ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ – vishwanews24

ಕಾನೂನುಬದ್ಧ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸೂಕ್ತ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ ಮಂಗಳೂರು: ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ…

36 minutes ago

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ  ಉಡುಪಿ: ಉಡುಪಿಯ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ…

41 minutes ago

ಮೈಸೂರು ದಸರಾ ಸಂಭ್ರಮಕ್ಕೆ ಕೆಎಸ್‌ಆರ್‌ಟಿಸಿ ಸಜ್ಜು: 3,000 ಬಸ್‌ಗಳ ವ್ಯವಸ್ಥೆ, ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ – vishwanews24

ಮೈಸೂರು ದಸರಾ ಸಂಭ್ರಮಕ್ಕೆ ಕೆಎಸ್‌ಆರ್‌ಟಿಸಿ ಸಜ್ಜು: 3,000 ಬಸ್‌ಗಳ ವ್ಯವಸ್ಥೆ, ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ …

46 minutes ago

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago