Featured

ಭಾರತ್ ಜೋಡೋ ಯಾತ್ರೆಯ ಸಭೆಯಲ್ಲಿ ಭಾಗವಹಿಸಲು ನನ್ನನ್ನು ಆಹ್ವಾನಿಸಿಲ್ಲ, ನಾನ್ಯಾಕೆ ಹೋಗಲಿ : ಸಿದ್ದರಾಮಯ್ಯ  – Vishwanews24

ಭಾರತ್ ಜೋಡೋ ಯಾತ್ರೆಯ ಸಭೆಯಲ್ಲಿ ಭಾಗವಹಿಸಲು ನನ್ನನ್ನು ಆಹ್ವಾನಿಸಿಲ್ಲ, ನಾನ್ಯಾಕೆ ಹೋಗಲಿ : ಸಿದ್ದರಾಮಯ್ಯ

ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಭೆಯಲ್ಲಿ ಭಾಗವಹಿಸಲು ನನ್ನನ್ನು ಆಹ್ವಾನಿಸಿಲ್ಲ, ನಾನ್ಯಾಕೆ ಹೋಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಸಮಾಧಾನಗಳು ಸೃಷ್ಟಿಯಾಗಿವೆ. ಯಾತ್ರೆಯ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್ ಅವರೇ ನೋಡಿಕೊಳ್ಳುತ್ತಿದ್ದಾರೆ. ಅಲ್ಲದೆ ಸಿದ್ದತಾ ಸಭೆಗಳಿಗಾಗಲೀ, ಯಾತ್ರೆಯಲ್ಲಿ ಭಾಗವಹಿಸುವುದಕ್ಕಾಗಲೀ ಸಿದ್ದರಾಮಯ್ಯ ಅವರಿಗೆ ಯಾವುದೇ ಆಹ್ವಾನ ಇರಲಿಲ್ಲ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಬೆಂಗಳೂರಿನಲ್ಲಿ ನಿನ್ನೆ (ಸೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಾಗೂ ಭಾರತ್ ಜೋಡೋ ಯಾತ್ರೆಯ ಸಭೆ ಎದುರು ಬದುರು ಹಾಲ್‌ನಲ್ಲೇ ನಡೆದಿತ್ತು. ಶಾಸಕಾಂಗ ಸಭೆಗೆ ಆಗಮಿಸಿದ ಸಿದ್ದರಾಮಯ್ಯರನ್ನು ಭಾರತ್ ಜೋಡೋ ಸಭೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ನಾಯಕರಾದ ಅಜಯ್ ಸಿಂಗ್ ಹಾಗೂ ಸಲೀಂ ಅಹಮದ್ ಆಹ್ವಾನಿಸಿದರು. ಆದರೆ ಈ ಆಹ್ವಾನವನ್ನು ತಿರಸ್ಕರಿಸಿದ ಸಿದ್ದರಾಮಯ್ಯ ಅವರು, ನನಗೆ ಸಭೆಯಲ್ಲಿ ಭಾಗವಹಿಸುವಂತೆ ಯಾವುದೇ ಆಹ್ವಾನ ನೀಡಿಲ್ಲ. ಮತ್ಯಾಕೆ ನಾನು ಹೋಗಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಭಾವಚಿತ್ರವನ್ನೂ ಹಾಕದಿರುವುದಕ್ಕೆ ಸಿದ್ದರಾಮಯ್ಯ ಬಣ ಅಸಮಾಧಾನಗೊಂಡಿದೆ ಎನ್ನಲಾಗಿದೆ.

ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

Vishwa News 24

Recent Posts

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

23 minutes ago

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…

30 minutes ago

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…

35 minutes ago

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

42 minutes ago

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

49 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

1 hour ago