ಚಾಮರಾಜನಗರ: ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ. ಸಂಸತ್ತಿನಲ್ಲಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ, ವಿಧಾನಸಭೆಗಳಲ್ಲೂ ಮಾತನಾಡಲು ಅವಕಾಶವಿಲ್ಲ. ಆದ್ದರಿಂದ ಪಾದಯಾತ್ರೆ ಬಿಟ್ಟು ಬೇರೆ ದಾರಿ ನಮಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಐತಿಹಾಸಿಕ ಭಾರತ ಐಕ್ಯತಾ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದೆ, ಗುಂಡ್ಲುಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ನಡೆಯುತ್ತಿರುವ ಸ್ವಾಗತ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ರಾಷ್ಟ್ರಧ್ವಜವನ್ನು ನೀಡಿ ಸ್ವಾಗತಿಸಲಾಯ್ತು.
ಗುಂಡ್ಲುಪೇಟೆಯ ‘ಭಾರತ್ ಜೋಡೋ ಯಾತ್ರೆ’ಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ. ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ’ ಎಂದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ದೇಶ ಎದುರಿಸುತ್ತಿರುವ ಸಮಸ್ಯೆಗಳು, ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳನ್ನು ವಿರೋಧ ಪಕ್ಷದ ಪಾಲಿಗೆ ಮುಚ್ಚಲಾಗಿದೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದರು.
‘ಬಿಜೆಪಿ, ಆರ್ ಎಸ್‌ಎಸ್ ವಿಚಾರಧಾರೆಗಳು ದೇಶದಲ್ಲಿ ದ್ವೇಷ, ಹಿಂಸೆಯನ್ನು ಸೃಷ್ಟಿಸುತ್ತಿವೆ. ದೇಶದ ಸಂವಿಧಾನ ಇಲ್ಲದಿದ್ದರೆ, ತ್ರಿವರ್ಣ ಧ್ಬಜಕ್ಕೆ ಬೆಲೆ ಇಲ್ಲ. ಸಂವಿಧಾನವನ್ಜು ರಕ್ಷಿಸಬೇಕಾಗಿದೆ. ನಮ ಯಾತ್ರೆಯಲ್ಲಿ ದ್ವೇಷ, ಹಿಂಸೆ ಇಲ್ಲ. ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುತ್ತೇವೆ. ಯಾತ್ರೆಯಲ್ಲಿ ಯಾರಾದರೂ ಎಡವಿ ಬಿದ್ದರೆ, ಉಳಿದವರು ಅವರನ್ನು ಮೇಲಕ್ಕೆತ್ತಿ ಮುನ್ನಡೆಸುತ್ತಾರೆ. ಬಿದ್ದವನ ಜಾತಿ, ಧರ್ಮ, ಭಾಷೆ ಎಂದು ಯಾರೂ ಕೇಳುವುದಿಲ್ಲ’ ಎಂದು ರಾಹುಲ್ ಹೇಳಿದರು.
‘ನಾವಿಲ್ಲಿ ಉದ್ದುದ್ದ ಭಾಷಣ ಮಾಡುವುದಿಲ್ಲ. ಆರೇಳು ಗಂಟೆ ನಡೆಯುತ್ತೇವೆ. 15 ನಿಮಿಷ ಮಾತನಾಡುತ್ತೇವೆ. ಜನರ ಮಾತುಗಳನ್ನು ಕೇಳುತ್ತೇವೆ. ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ, ಸರ್ಕಾರಿ ಸಂಸ್ಥೆಗಳ ಖಾಸಗೀಕರರಣ ಬಗ್ಗೆ ಜನರು ಮಾತನಾಡುತ್ತಿದ್ದಾರೆ’ ಎಂದರು.
ಇದನ್ನೂ ಓದಿ: ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಜನರಲ್ ಅನಿಲ್ ಚೌಹಾಣ್ – Vishwanews24
ರಾಜ್ಯ ಪ್ರವೇಶಿಸಿದ ಪಾದಯಾತ್ರೆಯ ಮೊದಲ ದಿನ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಚ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಧ್ರುವನಾರಾಯಣ, ಬಿ ಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಎಂಬಿ ಪಾಟೀಲ್ ಸೇರಿದಂತೆ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…