ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ನಾಳೆ ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ. ಈ ಯಾತ್ರೆ ರಾಜ್ಯದಲ್ಲಿ 21 ದಿನಗಳ ಕಾಲ ಸುಮಾರು ಎಂಟು ಜಿಲ್ಲೆಗಳ ಮೂಲಕ 511 ಕಿ.ಮೀ. ದೂರ ಯಾತ್ರೆ ಸಂಚರಿಸಲಿದೆ.
ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರು ಹೆಜ್ಜೆ ಹಾಕಲಿದ್ದಾರೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸುಮಾರು 25 ರಿಂದ 30 ಸಾವಿರಕ್ಕೂ ಅಧಿಕ ಮಂದಿ ಗುಂಡ್ಲುಪೇಟೆಯಲ್ಲಿ ನಡೆಯಲಿರುವ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಚಾಮರಾಜನಗರ ಜಿಲ್ಲೆಯ ಬಳಿಕ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಬಳ್ಳಾರಿ ಜಿಲ್ಲೆಗಳ ವಿವಿಧ ವಿಧಾನಸಭಾ ಕ್ಷೇತ್ರ, ಲೋಕಸಭಾ ಕ್ಷೇತ್ರಗಳ ಮೂಲಕ ಯಾತ್ರೆ ಸಂಚರಿಸಲಿದೆ. ಆಯಾ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸುವಾಗ ಸುತ್ತಮುತ್ತಲ ಕ್ಷೇತ್ರಗಳ ಪಕ್ಷದ ಶಾಸಕರು, ನಾಯಕರು, ಮುಖಂಡರು, ಕಾರ್ಯಕರ್ತರು ಭಾಗಿಯಾಗುವಂತೆ ಕೆಪಿಸಿಸಿ ಈಗಾಗಲೇ ಸ್ಪಷ್ಟ ಸೂಚನೆ ನೀಡಿದೆ.
ಕೇರಳ : ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ವಿಟ್ಲದ ಯುವಕ ಮೃತ್ಯು – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…