Featured

ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ  – vishwanews24

ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಮಂಗಳೂರು : ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ತಿಳಿಯುತ್ತದೆ. ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಬೋಳಿಯಾರ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ಭರತ್ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ಇನ್ನು ಸರಿಪಡಿಸುತ್ತರೋ ಗೊತ್ತಿಲ್ಲ ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಈ ವಿಚಾರವನ್ನು ಗಮನಿಸಿದರೆ ಹಿಂದೂಗಳಿಗೆ ಕಾನೂನನ್ನು ನೀವೆ ಕೈಗೆತ್ತಿಕೊಳ್ಳಿ ಎಂಬ ಸೂಚನೆಯನ್ನು ಸರಕಾರವೇ ನೀಡಿದಂತೆ ಕಾಣುತ್ತಿದೆ ಎಂದರು.

ಇನ್ನು ಬಿಜೆಪಿ ಕಾಯಕರ್ತರ ಮೇಲೆ ನೀಡಲಾದ ಪ್ರತಿ ದೂರಿನ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ನವರ ಪ್ರೇರಣೆಯಿಂದ ಕಾರ್ಯಕರ್ತರ ಮೇಲೆ ಕೇಸ್ ಹಾಕಿರುವ ವಿಚಾರ ನಮ್ಮ ಅರಿವಿಗೆ ಬಂದಿದೆ. ವಿಜಯೋತ್ಸವ ಮುಗಿದ ನಂತರ ಮೂರು ಮಂದಿ ಯುವಕರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಹೊರತಾಗಿ ಪ್ರಚೋದನಾಕಾರಿ ಘೋಷಣೆ ಕೂಗಿಲ್ಲ. ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಪೊಲೀಸರು ಹೇಳುತ್ತಿದ್ದಾರೆ. ಭಾರತ್ ಮಾತಾ ಕೀ ಜೈ ಎನ್ನುವುದು ಪ್ರಚೋದನಕಾರಿ ಘೋಷಣೆ ಎಂದಾದರೆ ನಾವು ಪಾಕಿಸ್ತಾನದಲ್ಲಿ ಇದ್ದೇವಾ ಅಥವಾ ಭಾರತದಲ್ಲಿ ಇದ್ದೇವಾ ಎಂಬ ಪ್ರಶ್ನೆ ಮೂಡುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಎಂದವರ ಮೇಲೆ ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸುವವರು ಭಾರತ್ ಮಾತಕೀ ಜೈ ಎಂದವರಿಗೆ ಹಲ್ಲೆಯಾದಾಗ ಪ್ರೋತ್ಸಾಹ ನೀಡುವ ಸರ್ಕಾರದ ವಿರುದ್ಧ ಕಿಡಿಕಾರಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago