ಬೆಂಗಳೂರು : ಹಿರಿಯ ಬಿಜೆಪಿ ನಾಯಕಿ, ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿಧನಕ್ಕೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಕಂಬನಿ ಮಿಡಿದಿದ್ದಾರೆ.
ಸುಷ್ಮಾ ಸ್ವರಾಜ್ ನಿಧನಕ್ಕೆ ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ಶ್ರೀರಾಮುಲು, ಭಾರತ ಅನೇಕ ಶ್ರೇಷ್ಠ ನೇತಾರರನ್ನು ಕಂಡಿದೆ, ಆದರೆ ಮಾತೃಹೃದಯದ, ಮಮತೆಯ ವ್ಯಕ್ತಿರೂಪವಾಗಿದ್ದ, ತಾಯಿ ಪ್ರತೀಕವಾಗಿದ್ದ ಸುಷ್ಮಾಜೀ ಅವರಿಗೆ ಸರಿಸಾಟಿಯಾಗಬಲ್ಲವರು ಯಾರೂ ಇಲ್ಲ. ಇಂದು ಸುಷ್ಮಾಜೀ ಅವರನ್ನು ಕಳೆದುಕೊಂಡು ನಾನು ಮಾತ್ರವಲ್ಲ, ನನ್ನಂಥ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಮಾತೃಶೋಕದಲ್ಲಿದ್ದೇವೆ, ಅನಾಥರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ನಾವು ರಾಜಕಾರಣಿಗಳ ಮಕ್ಕಳಲ್ಲ, ನಾವು ರಾಜಕೀಯ ಪ್ರವೇಶಕ್ಕೆ ಸುಷ್ಮಾ ಸ್ವರಾಜ್ ಅವರೇ ಕಾರಣ, ನಮ್ಮ ಸೇವೆ ಸಮಾಜಕ್ಕೆ ಬಹಳ ಇದೆ ಎಂದು ಅರಿವು ಮೂಡಿಸಿ, ರಾಜಕಾರಣಕ್ಕೆ ನಮ್ಮನ್ನು ತಂದವರು. ಹಾಗಾಗಿ ಸಾಮಾನ್ಯ ಕುಟುಂಬದಲ್ಲಿ ಬೆಳೆದ ನಾವು ಇಂದು ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದೆವು. ಅವರ ಪ್ರೀತಿ, ವಾತ್ಸಾಲ್ಯವನ್ನು ಉಸಿರು ಇರುವ ತನಕ ಮರೆಯುವ ಹಾಗಿಲ್ಲ .
ನನ್ನನ್ನು ಸದಾ ಆಶೀರ್ವದಿಸುತ್ತಾ, ಕೈಹಿಡಿದು ನಡೆಸಿದ ತಾಯಿ ಸ್ವರೂಪರು ಇಂದು ನಮ್ಮೊಂದಿಗೆ ಇಲ್ಲ. ದುಃಖವನ್ನು ಹೇಳಲು ಪದಗಳು ಸಿಗುತ್ತಿಲ್ಲ. ಇತಿಹಾಸದಲ್ಲಿ ಮರೆಯಲಾಗದ ಸಾಧನೆ, ವ್ಯಕ್ತಿತ್ವ ಮತ್ತು ನೆನಪುಗಳನ್ನು ಬಿಟ್ಟು ಹೋಗಿರುವ ತಾಯಿ ಸುಷ್ಮಾಜೀಗೆ ನನ್ನ ಕೋಟಿಕೋಟಿ ನಮನಗಳು. ಅಮ್ಮ, ದೇವರು ನಿಮಗೆ ಸದ್ಗತಿಯನ್ನು ಕೊಡುವುದು ಖಂಡಿತ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…