Featured

ಭಾರತ ಗಡಿಯಲ್ಲಿ ಯೋಧರ ಜತೆ ದೀಪಾವಳಿ ಆಚರಿಸಿ ಶುಭಕೋರಿದ ಪ್ರಧಾನಿ ಮೋದಿ

ನವದೆಹಲಿ:​​ ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದ್ದು ಪ್ರಧಾನಿ ಮೋದಿ ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್​ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿದರು.

ಉತ್ತರಾಖಂಡದ ಹರ್ಸಿಲ್​ ಗ್ರಾಮಕ್ಕೆ ಭೇಟಿ ನೀಡಿ ಯೋಧರಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ, ಅತಿ ಎತ್ತರದ ಹಿಮಾವೃತ ಪ್ರದೇಶಗಳಲ್ಲಿ ತಮ್ಮ ಕರ್ತವ್ಯವನ್ನು ಭಕ್ತಿಯಿಂದ ಮಾಡುವ ಇವರಿಂದಲೇ ದೇಶದ ಶಕ್ತಿ ಹೆಚ್ಚುತ್ತಿದೆ ಮತ್ತು 125 ಕೋಟಿ ಭಾರತೀಯರ ಕನಸುಗಳ ಭದ್ರವಾಗಿದೆ ಎಂದರು..

ಬೆಳಕಿನ ಹಬ್ಬ ದೀಪಾವಳಿ ಭಯವನ್ನು ಹೋಗಲಾಡಿಸಿ ಒಳ್ಳೆಯ ಬೆಳಕು ನೀಡಲಿ.  ಸೈನಿಕರ ಶಿಸ್ತು ಜನತೆಯಲ್ಲಿ ಭಯವನ್ನು ಹೋಗಲಾಡಿಸಿ ಭದ್ರತೆಯನ್ನು ಮೂಡಿಸುವಲ್ಲಿ ನೆರವಾಗಲಿ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ದೀಪಾವಳಿ ದೀಪಗಳ ಹಬ್ಬವಾಗಿದ್ದು ನಾವು ಒಳ್ಳೆತನವನ್ನು ಹಂಚಿ ಭಯವನ್ನು ದೂರ ಮಾಡಬೇಕು ಎಂದ ಅವರು, ಯೋಧರು ತಮ್ಮ ಕರ್ತವ್ಯದಿಂದ ಜನರಲ್ಲಿ ಭದ್ರತೆ ನೀಡುವುತ್ತಿರುವುದರ ಜತೆ ನಿರ್ಭಯದಿಂದ ಜೀವನ ಮಾಡುವಂತಾಗಿದೆ ಎಂದರು.

ನಾನು ಗುಜರಾತಿನ ಮುಖ್ಯಮಂತ್ರಿಯಾದಾಗಿನಿಂದಲೂ ದೀಪಾವಳಿ ಹಬ್ಬದ ದಿನ ಯೋಧರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಕಳೆದ ವರ್ಷದ ದೀಪಾವಳಿ ಸಂಭ್ರಮವನ್ನು ಹಂಚಿಕೊಂಡರು. ಯೋಧರ ಭೇಟಿ ವೇಳೆ ಮೋದಿ ಅವರಿಗೆ ಸಿಹಿ ವಿತರಿಸಿದರು.

ಸೈನಿಕರಿಗೆ ಸಿಹಿ ಹಂಚಿ ಸಂವಾದ ನಡೆಸಿದ  ಪ್ರಧಾನಿ, ಮಾಜಿ ಯೋಧರ ಕಲ್ಯಾಣಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago