ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭಮನ್ ಗಿಲ್ ನೇಮಕ – vishwanews24
ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭಮನ್ ಗಿಲ್ ನೇಮಕ
ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ 18 ಮಂದಿ ಆಟಗಾರರ ಟೆಸ್ಟ್ ತಂಡವೂ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಕೌಂಟಿಯಲ್ಲಿ ಆಡಿದ ಅನುಭವವಿರುವ ಕರುಣ್ ನಾಯರ್ ಎಂಟು ವರ್ಷಗಳ ಬಳಿಕ ರಾಷ್ಡ್ರೀಯ ತಂಡಕ್ಕೆ ಮರಳಿದ್ದು, ಅದಕ್ಕೂ ಮುನ್ನ ಅವರು ಭಾರತ ಎ ತಂಡದ ಪರವಾಗಿ ಇಂಗ್ಲೆಂಡ್ಗೆ ತೆರಳಲಿದ್ದಾರೆ. ಉಳಿದಂತೆ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೆ.ಎಲ್.ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ.
ಆದರೆ, ಭಾರತದ ಭರವಸೆಯ ಮಧ್ಯಮ ವೇಗಿ ಮುಹಮ್ಮದ್ ಶಮಿಯನ್ನು ತಂಡದಿಂದ ಕೈಬಿಡಲಾಗಿದೆ. ಮುಹಮ್ಮದ್ ಶಮಿಯ ಕೆಲಸದ ಹೊರೆ ನಿರ್ವಹಣೆಯೇ ಪ್ರಮುಖ ಕಾರಣ ಎಂದು ಭಾರತ ತಂಡದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ.
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಕರುಣ್ ನಾಯರ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ನಿತೇಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿ.ಕೀ), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಆಕಾಶ್ ದೀಪ್, ಅರ್ಶದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್
ಉಡುಪಿ: ಮೇ 24ರಿಂದ 30ರ ವರೆಗೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – vishwanews24
