ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮದಿನದ ಶುಭಾಷಯಗಳು : ಪ್ರಧಾನಿ ಮೋದಿ -Vishwanews24

ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮದಿನದ ಶುಭಾಷಯಗಳು : ಪ್ರಧಾನಿ ಮೋದಿ

ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು..

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆ ಅಂಗವಾಗಿ ಬುಧವಾರ ಗೌರವ ಸಲ್ಲಿಸಿ, ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

 

ಮೋದಿಯವರು ತಮ್ಮ ಟ್ವಿಟರ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಫೊಟೋವನ್ನು ಪೋಸ್ಟ್‌ ಮಾಡಿದ್ದು, “ಶಿವಾಜಿ ಅವರು ಧೈರ್ಯದ ಸಾಕಾರ ಮೂರ್ತಿ, ಸಹಾನುಭೂತಿ ಮತ್ತು ಉತ್ತಮ ಆಡಳಿತಗಾರ. ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮವಾರ್ಷಿಕೋತ್ಸವದಂದು ನಮಿಸುತ್ತೇನೆ. ಅವರ ಜೀವನವು ಅಸಾಧಾರಣವಾಗಿದ್ದು ಅದು ಲಕ್ಷಾಂತರ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗೆಯೇ ಮತ್ತೊಂದು ಟ್ವೀಟ್‌ನಲ್ಲಿ ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು. ಅವರು ಬಲಿಷ್ಠವಾದ ನೌಕಾಪಡೆ ನಿರ್ಮಿಸುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಜಾರಿಗೆ ತರುವುದರಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮವಾಗಿದ್ದರು. ಅನ್ಯಾಯ ಹಾಗೂ ಬೆದರಿಕೆಗಳನ್ನು ವಿರೋಧ ಮಾಡಿದಕ್ಕಾಗಿ ಅವರನ್ನು ಎಂದಿಗೂ ಸ್ಮರಿಸಲಾಗುವುದು ಎಂದಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

19 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

19 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

19 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

20 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

20 hours ago