ನವದೆಹಲಿ: ಪುಲ್ವಾಮಾ ದಾಳಿ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಪಾಕಿಸ್ತಾನ ಸಲಹುತ್ತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಬೆಳವಣಿಗೆ ನಂತರದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ ಎಂದಿದ್ದಾರೆ.
ಪುಲ್ವಾಮಾ ದಾಳಿ ನಂತರ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಇಮ್ರಾನ್ ಖಾನ್, “ಯುದ್ಧವನ್ನು ಆರಂಭಿಸುವುದು ತುಂಬಾ ಸುಲಭ. ಆದರೆ, ಈ ಯುದ್ಧ ಹೇಗೆ ಅಂತ್ಯಗೊಳ್ಳುತ್ತದೆ ಎಂಬುದನ್ನು ದೇವರು ಮಾತ್ರ ಅರಿಯಲು ಸಾಧ್ಯ. ಸಮಸ್ಯೆಗಳನ್ನು ಬಗೆಹರಿಸಲು ಅಹಿಂಸೆ ಮಾರ್ಗವಲ್ಲ. ಮಾತುಕತೆ ಮೂಲಕ ಎಲ್ಲದಕ್ಕೂ ನಾವು ಪರಿಹಾರ ಕಂಡುಕೊಳ್ಳಬಹುದು,” ಎಂದಿದ್ದಾರೆ.
ಪುಲ್ವಾಮಾ ದಾಳಿಯ ಹಿಂದೆ ಪಾಕ್ ಕೈವಾಡವಿದೆ ಎಂದು ಭಾರತ ಆರೋಪಿಸಿದೆ. ಆದರೆ, ಈ ಆರೋಪವನ್ನು ಇಮ್ರಾನ್ ಖಾನ್ ತಿರಸ್ಕರಿಸಿದ್ದಾರೆ. “ಭಾರತ ಯಾವುದೇ ಸಾಕ್ಷ್ಯವಿಲ್ಲದೆ ಪಾಕಿಸ್ತಾನದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತಿದೆ. ಶಾಂತಿ ಕಾಪಾಡಲು ಲಕ್ಷಾಂತರ ಮಂದಿ ನಮ್ಮವರು ಪ್ರಾಣ ಬಿಟ್ಟಿದ್ದಾರೆ. ಹೀಗಿರುವಾಗ ನಾವೇಕೆ ಈ ರೀತಿ ದಾಳಿಗಳಿಗೆ ಕುಮ್ಮಕ್ಕು ನೀಡುತ್ತೇವೆ? ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಗೆ ಪಾಕಿಸ್ತಾನ ಸಂಪೂರ್ಣ ಬೆಂಬಲ ನೀಡಲಿದೆ,” ಎಂದು ಅವರು ಆಶ್ವಾಸನೆ ನೀಡಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…