ಅಬುದಾಬಿ: ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಯುವಕನೊಬ್ಬ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಜಾಲತಾಣಿಗರಿಂದ ಮೆಚ್ಚುಗೆಯ ಸುರಮಳೆಯೇ ಹರಿದಿದೆ.
ಪಾಕಿಸ್ತಾನದ ಆದಿಲ್ ತಾಜ್ ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಯುವಕ. ಸೆಪ್ಟೆಂಬರ್ 19 ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಪಂದ್ಯದ ಲೀಗ್ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಬರೋಬ್ಬರಿ 15 ತಿಂಗಳ ಬಳಿಕ ಎದುರಾಗಿದ್ದವು. ಈ ವೇಳೆ ಪಂದ್ಯಕ್ಕೂ ಮುನ್ನ ಎರಡು ರಾಷ್ಟ್ರಗಳ ರಾಷ್ಟ್ರಗೀತೆಯನ್ನು ಹಾಕಿದ್ದರು. ಈ ವೇಳೆ ಭಾರತದ ರಾಷ್ಟ್ರಗೀತೆಯನ್ನು ಆದಿಲ್ ತಾಜ್ ರವರು ಹಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆದಿಲ್ ತಾಜ್, ನಾನು ಭಾರತದ ರಾಷ್ಟ್ರಗೀತೆಯನ್ನು ಮೊದಲ ಬಾರಿ ಕೇಳಿದ್ದು, ಬಾಲಿವುಡ್‍ನ `ಕಬಿ ಖುಷಿ ಕಬಿ ಗಂ’ ಚಿತ್ರದಲ್ಲಿ. ನನಗೆ ರಾಷ್ಟ್ರಗೀತೆಯನ್ನು ಕೇಳುತ್ತಲೇ ರೋಮಾಂಚನವಾಗಿತ್ತು. ಅಲ್ಲದೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಶಾಂತಿಗಾಗಿ ನನ್ನ ಕಡೆಯಿಂದ ಸಣ್ಣ ಪ್ರಯತ್ನ ಎನ್ನುವಂತೆ ನಾನು ಭಾರತದ ರಾಷ್ಟ್ರಗೀತೆಯನ್ನು ಹಾಡಿದೆ ಎಂದು ಹೇಳಿದ್ದಾರೆ.
ಉಭಯ ದೇಶಗಳ ನಡುವೆ ಶಾಂತಿಗಾಗಿ ಇದು ನನ್ನ ಸಣ್ಣ ಪ್ರಯತ್ನವಾಗಿದೆ. ಹೀಗೆ ಮಾಡುವುದಕ್ಕೆ ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್ ಖಾನ್ ರವರ ಪ್ರೇರಣೆಯೂ ಇದೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ಶಾಂತಿ ಸ್ಥಾಪನೆ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಬಂದರೆ, ನಾವು ಎರಡು ಹೆಜ್ಜೆ ಮುಂದೆ ಹೋಗುತ್ತೇನೆ ಎಂದು ಹೇಳಿದ್ದರು. ಪಂದ್ಯಕ್ಕೂ ಮುನ್ನ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಇಮ್ರಾನ್ ಖಾನ್‍ರ ಮಾತು ನೆನೆಪಾಗಿ, ಶಾಂತಿ ಸ್ಥಾಪನೆಗೆ ನನ್ನದು ಸಹ ಪಾತ್ರವಿರಬೇಕು ಎನ್ನುವ ನಿಟ್ಟಿನಲ್ಲಿ ನಾನು ಹಾಡಿದೆ ಎಂದು ತಿಳಿಸಿದರು.
ಅಲ್ಲದೇ ಪಾಕಿಸ್ತಾನದ ರಾಷ್ಟ್ರಗೀತೆ ಮೊಳಗಿದಾಗ ಭಾರತೀಯರು ಗೌರವ ಸಮರ್ಪಿಸಿದ್ದನ್ನು ಗಮನಿಸಿದ್ದೆ. ಮತ್ತೊಮ್ಮೆ ಭಾನುವಾರ(ಇಂದು) ನಡೆಯುವ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಎರಡು ರಾಷ್ಟ್ರಗಳ ಧ್ವಜವನ್ನು ಹಿಡಿದು ಹೋಗುತ್ತೇನೆ ಎಂದು ಹೇಳಿದ್ದಾರೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…