ಹೊಸದಿಲ್ಲಿ: ಭಾರತದ ಒಟ್ಟಾರೆ ಆರ್ಥಿಕತೆಯ ಮುಖ್ಯ ಸ್ಥಂಭಗಳು ಸಾಕಷ್ಟು ಸಶಕ್ತವಾಗಿರುವುದರಿಂದ ದೇಶದ ಅರ್ಥವ್ಯವಸ್ಥೆ ಸದ್ಯ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೊಂಡಿದ್ದಾರೆ.
‘2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಮೊದಲು ಬಂದಾಗ ದೇಶದ ಅರ್ಥವ್ಯವಸ್ಥೆ ದುಸ್ಥಿತಿಯಲ್ಲಿತ್ತು” ಎಂದು ಗುಜರಾತ್ ನ ಗಾಂಧಿನಗರದ ಪಂಡಿತ್ ದೀನ್ ದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ ಶಾ ಹೇಳಿದರು.
‘ಆದರೆ ಇಂದು 2019ರಲ್ಲಿ ಭಾರತ ಶೇ.7ರಷ್ಟು ಪ್ರಗತಿ ಪ್ರಮಾಣದೊಂದಿಗೆ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ” ಎಂದು ಶಾ ಹೇಳಿಕೊಂಡರು.
ಕಳೆದ ಐದು ವರ್ಷಗಳಲ್ಲಿ ಸರಕಾರ ಹಣದುಬ್ಬರ ಪ್ರಮಾಣವನ್ನು ಶೇ.3ಕ್ಕಿಂತಲೂ ಕಡಿಮೆಯಿರುವಂತೆ ನೋಡಿಕೊಳ್ಳಲು ಸಮರ್ಥವಾಗಿದ್ದು, ವಿತ್ತೀಯ ಕೊರತೆ ಶೇ. 5ರಿಂದ ಶೇ. 3.5ಗೆ ಇಳಿದಿದೆ ಎಂದು ಅವರು ಹೇಳಿದರು. ಆರ್ಥಿಕತೆಯ ಕುರಿತಂತೆ ಭಾರತ ಮೂರನೇ ಅತ್ಯಂತ ಮುಂದುವರಿದ ರಾಷ್ಟ್ರವಾಗಬೇಕೆಂದು ಪ್ರಧಾನಿ ಮೋದಿ ಹೇಳಿರುವುದುರಿಂದ ಸರಕಾರ ಈ ನಿಟ್ಟಿನಲ್ಲಿ ಮುಂದಡಿಯಿಟ್ಟಿದೆ,” ಎಂದು ಶಾ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…