ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿಯಾಗಿ ಗುರುವಾರ ಮಾತುಕತೆಯನ್ನು ನಡೆಸಿದರು.
ಕಣಿವೆ ನಾಡು ಕಾಶ್ಮೀರ ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಇದರಲ್ಲಿ 3 ನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆ ವಹಿಸುವುದು ಸೂಕ್ತವಾಲ ಎಂದು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಹೇಳಿದ್ದಾರೆ.
ಹವಾಮಾನ ಬದಲಾವಣೆ, ಸೈಬರ್ ಸುರಕ್ಷತೆ, ರಕ್ಷಣಾ ಮತ್ತು ಬಾಹ್ಯಾಕಾಶ ಸಹಕಾರ ಮತ್ತು ಕಾಶ್ಮೀರ ವಿಷಯದಲ್ಲಿ ಬೆಂಬಲ ಇತ್ಯಾದಿ ಅಂಶಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಮ್ಯಾನುಯೆಲ್ ಮ್ಯಾಕ್ರೋನ್ ನಡುವೆ ಮಾತುಕತೆ ನಡೆದಿದೆ. ಉಭಯ ನಾಯಕರ ಐದನೇ ಬಾರಿಗೆ ಭೇಟಿ ಇದಾಗಿದೆ.
“ನಮ್ಮ ಸ್ನೇಹವು ಸ್ವಾರ್ಥದ ಮೇಲೆ ನಿಂತಿಲ್ಲ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆದರ್ಶಗಳ ಮೇಲೆ ನಿಂತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ ಮತ್ತು ಫ್ರಾನ್ಸ್ ಹೆಗಲಿಗೆ ಹೆಗಲು ಕೊಟ್ಟು ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಈ ಅಂಶಗಳೇ ಕಾರಣ ” ಎಂದು ಹೇಳಿದರು.
ಜಾಹಿರಾತು
ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಲು ಪ್ಯಾರಿಸ್ ನೀಡಿದ ಬೆಂಬಲವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಫ್ರೆಂಚ್ ಅಧ್ಯಕ್ಷರು ಪುಲ್ವಾಮಾ ದಾಳಿಯನ್ನು ಪ್ರಸ್ತಾಪಿಸುತ್ತಾ, “ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಒಟ್ಟಾಗಿ ಕೆಲಸ ಮಾಡಲಿದ್ದೇವೆ” ಎಂದು ಹೇಳಿದರು.
ಕಾಶ್ಮೀರ ಕುರಿತು ಮಾತನಾಡಿದ ಫ್ರೆಂಚ್ ಅಧ್ಯಕ್ಷರು, “ಭಾರತ ಮತ್ತು ಪಾಕಿಸ್ತಾನ ಇದನ್ನು ದ್ವಿಪಕ್ಷೀಯವಾಗಿ ಪರಿಹರಿಸಬೇಕಾಗಿದೆ ಮತ್ತು ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಇಲ್ಲಿ ಉಚಿತವಲ್ಲ” ಎಂದು ಹೇಳಿದರು.
ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿ ಸಮಸ್ಯೆಯನ್ನು ಬಗೆಹರಿಸಬೇಕು ಮತ್ತು ಈ ಪ್ರದೇಶದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಯಾವುದೇ ಭಯೋತ್ಪಾದಕ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಾನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಹೇಳುವುದಾಗಿ ಮ್ಯಾಕ್ರೋನ್ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…