Featured

ಭಾರತ ಮಾತೆ ವಿಧವೆಯಲ್ಲ :ಹಣೆಗೆಬಿಂದಿ ಧರಿಸದ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಹಿಂದೂ ಕಾರ್ಯಕರ್ತ ಸಂಭಾಜಿ ಭಿಡೆ – Vishwanews24

ಭಾರತ ಮಾತೆ ವಿಧವೆಯಲ್ಲ :ಹಣೆಗೆಬಿಂದಿ ಧರಿಸದ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಹಿಂದೂ ಕಾರ್ಯಕರ್ತ ಸಂಭಾಜಿ ಭಿಡೆ

ಮಹಾರಾಷ್ಟ್ರ:  ಹಣೆಗೆ ಬಿಂದಿ ಇರಿಸದ ಕಾರಣಕ್ಕೆ ಪತ್ರಕರ್ತೆಯ ಜತೆ ಮಾತನಾಡಲು ಮಹಾರಾಷ್ಟ್ರದ ಹಿಂದೂ ಕಾರ್ಯಕರ್ತ ಸಂಭಾಜಿ ಭಿಡೆ ನಿರಾಕರಿಸಿದ ಘಟನೆ ಬುಧವಾರ ನಡೆದಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಕ್ಷಿಣ ಮುಂಬಯಿಯ ರಾಜ್ಯ ಕಾರ್ಯಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಿದ ಬಳಿಕ ಭಿಡೆ ಈ ನಡೆ ಅನುಸರಿಸಿದ್ದಾರೆ.

ತಮ್ಮ ಹೇಳಿಕೆ ಪಡೆದುಕೊಳ್ಳಲು ಮುನ್ನ ಹಣೆಗೆ ಬಿಂದಿ ಇರಿಸಬೇಕು ಎಂದು ಟೆಲಿವಿಷನ್ ವರದಿಗಾರ್ತಿಗೆ ಭಿಡೆ ಮರಾಠಿಯಲ್ಲಿ ಹೇಳುವುದು ಕೇಳಿಸಿದೆ. ಬಳಿಕ ಅವರು ಆಕೆ ಜತೆ ಮಾತನಾಡಲು ನಿರಾಕರಿಸಿದ್ದಾರೆ.

ಹೆಣ್ಣು ಭಾರತ ಮಾತೆ ಇದ್ದಂತೆ. ಆಕೆ ಹಣೆಗೆ ಕುಂಕುಮ ಇರಿಸದೆ ‘ವಿಧವೆ’ ರೀತಿ ಕಾಣಿಸಬಾರದು ಎಂದು ಸಂಭಾಜಿ ಭಿಡೆ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ ಹೇಳಿಕೆಗೆ ವಿವರಣೆ ನೀಡುವಂತೆ ಭಿಡೆ ಅವರಿಗೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಾಂಕರ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ನವೆಂಬರ್ 7 ರಂದು ಕಾಪು -ಬೈಂದೂರಿಗೆ ಮಾಜಿ ಹಾಗೂ ಹಾಲಿ ಮುಖ್ಯಮಂತ್ರಿಗಳ‌ ಆಗಮನ..

ಶಿಂಧೆ ಅವರನ್ನು ಭೇಟಿ ಮಾಡಿದ ಬಳಿಕ ಭಿಡೆ ಅವರು ನಿರ್ಗಮಿಸುತ್ತಿದ್ದಾಗ ಸಾಮ್ ಟಿವಿ ವಾಹಿನಿಯ ಪತ್ರಕರ್ತೆ ಅವರನ್ನು ಎದುರಾಗಿದ್ದರು. ತಮಗೆ ಪ್ರಶ್ನೆ ಕೇಳಲು ಮೈಕ್ ಹಿಡಿದ ವರದಿಗಾರ್ತಿ ಜತೆ ಮಾತನಾಡಲು ಭಿಡೆ ನಿರಾಕರಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಪತ್ರಕರ್ತೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಣೆಗೆ ಬಿಂದಿ ಇಡುವುದು ಅಥವಾ ಬಿಡುವುದು ತಮ್ಮ ವೈಯಕ್ತಿಕ ಆಯ್ಕೆ ಎಂದು ಅವರು ಹೇಳಿದ್ದಾರೆ. “ನಾವು ಜನರನ್ನು ಅವರ ವಯಸ್ಸು ಕಂಡು ಗೌರವಿಸುತ್ತೇವೆ. ಆದರೆ ಕೆಲವು ಜನರು ಗೌರವಕ್ಕೂ ಅರ್ಹರಾಗಿರುವುದಿಲ್ಲ. ಬಿಂದಿ ಇರಿಸುವುದು ಅಥವಾ ಬಿಡುವುದು ನನ್ನ ವೈಯಕ್ತಿಕ ಆಯ್ಕೆ. ಇದು ಪ್ರಜಾಪ್ರಭುತ್ವ” ಎಂದು ಹೇಳಿದ್ದಾರೆ.

ಕಾಪುವಿಗೆ ಲಾಲಾಜಿ‌ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ : vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago