ವಿಶಾಖಪಟ್ಟಣ: ಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ.
ವಿಶ್ವ ಕ್ರಿಕೆಟಿನಲ್ಲಿ ಹೊಸ ದಾಖಲೆ ಬರೆದ ಕೊಹ್ಲಿ
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ವಿಶ್ವ ಕ್ರಿಕೆಟಿನಲ್ಲಿ ಏಕದಿನಗಳಲ್ಲಿ ಅತಿ ವೇಗವಾಗಿ ಹತ್ತು ಸಾವಿರ ರನ್ ಪೂರೈಸಿದ ಆಟಗಾರನೆಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹತ್ತು ಸಾವಿರ ರನ್ ಕ್ಲಬ್ ನಲ್ಲಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಿಕಿ ಪಾಂಟಿಂಗ್ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.
ಎರಡನೇ ಏಕದಿನದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೊಹ್ಲಿ 89 ರನ್ ಮಾಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
10 ಸಹಸ್ರ ರನ್ ದಾಖಲೆ ಅಲ್ಲದೆ, ಸಚಿನ್ರ ಇನ್ನೊಂದು ದಾಖಲೆಯನ್ನೂ ವಿರಾಟ್ ಕೊಹ್ಲಿ ಮುರಿದರು. ವೆಸ್ಟ್ ಇಂಡೀಸ್ ವಿರುದ್ಧ ಏಕದಿನದಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರ ಎನ್ನುವ ಗೌರವವನ್ನು ವಿರಾಟ್ ಪಡೆದರು. ಸದ್ಯ ಕೊಹ್ಲಿ ವಿಂಡೀಸ್ ವಿರುದ್ಧ 29 ಏಕದಿನ ಇನಿಂಗ್ಸ್ಗಳಲ್ಲಿ 1688 ರನ್ ಬಾರಿಸಿದ್ದಾರೆ. ಸಚಿನ್ 39 ಇನಿಂಗ್ಸ್ಗಳಿಂದ 1573 ರನ್ ಬಾರಿಸಿದ ಸಾಧನೆ 2ನೇ ಸ್ಥಾನಕ್ಕೆ ಕುಸಿಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…