ಭಾರತ ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ : ನಿರ್ಮಲಾ ಸೀತಾರಾಮನ್ -Vishwanews24
ವಾಷಿಂಗ್ಟನ್; ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ ಭಾರತವಾಗಿದ್ದು, ಇನ್ನಷ್ಟು ವೇಗವಾಗಿ ಬೆಳೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದಲ್ಲಿ ಆರ್ಥಿಕಾಭಿವೃದ್ಧಿ ದರ ಕಡಿಮೆಯಾಗಿದೆ ಎಂದು ಹೇಳಿದೆ, ಆದರೆ ನಮ್ಮ ದೇಶದ ಆರ್ಥಿಕತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ನಿನ್ನೆ ವಾಷಿಂಗ್ಟನ್ ನಲ್ಲಿ ಭಾರತೀಯ ಪತ್ರಕರ್ತರೊಂದಿಗೆ ಮಾತನಾಡುವಾಗ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಳೆದ ವರ್ಷ ಭಾರತದ ಆರ್ಥಿಕಾಭಿವೃದ್ಧಿ ದರ ಶೇಕಡಾ 6.8ರಷ್ಟಾಗಿತ್ತು. ಐಎಂಎಫ್ ಇತ್ತೀಚೆಗೆ ಬಿಡುಗಡೆ ಮಾಡಿದ ‘ಎಕನಾಮಿಕ್ ಔಟ್ ಲುಕ್’ ಪುಸ್ತಕದಲ್ಲಿ ಈ ವರ್ಷ ಭಾರತದ ಆರ್ಥಿಕಾಭಿವೃದ್ಧಿ ಶೇಕಡಾ 6.1ರಷ್ಟಾಗಿದೆ ಎಂದು ಹೇಳಿದ್ದು ಮುಂದಿನ ವರ್ಷ ಶೇಕಡಾ 7ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಂದಾಜು ಮಾಡಿದೆ.
