ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಈಗ ಪಾಕ್ ತಂಡಕ್ಕೂ ಕೂಡ ಸೆಮಿಫೈನಲ್ ತಲುಪುವ ಸಣ್ಣ ಸಾಧ್ಯತೆ ಇದೆ.
ಹಾಗಾದರೆ ಇದಕ್ಕೆ ಪಾಕಿಸ್ತಾನ ತಂಡವು ಮುಂದಿನ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ವಿರುದ್ಧದ ಪಂದ್ಯಗಳನ್ನು ಗೆಲ್ಲಬೇಕು ಜೊತೆಗೆ ಇಂಗ್ಲೆಂಡ್ ತಂಡವು ಭಾರತ ತಂಡದ ವಿರುದ್ಧ ಸೋಲಬೇಕು ಆಗ ಪಾಕ್ ತಂಡವು 11 ಅಂಕಗಳೊಂದಿಗೆ ಸೆಮಿಫೈನಲ್ ತಲುಪಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಾಕ್ ನ ಮಾಜಿ ಆಟಗಾರ ಶೋಯಬ್ ಅಖ್ತರ್ ಭಾರತ ತಂಡವು ಪಾಕ್ ಸೆಮಿಫೈನಲ್ ತಲುಪಲು ಸಹಾಯ ಮಾಡ ಬೇಕು ಎಂದು ವಿನಂತಿಸಿಕೊಂಡಿದ್ದಾರೆ.
“ಈಗ ಭಾರತ ಸಹಾಯ ಮಾಡಿದರೆ ನಾವು ಸೆಮಿಫೈನಲ್‌ಗೆ ಏರಬಹುದು. ಹೇಗೆಂದರೆ, ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸುವುದು. ಆಗ ಇಂಗ್ಲೆಂಡ್ ಹೊರಬೀಳುತ್ತದೆ. ಪಾಕ್ ಮುಂದಿನೆರಡೂ ಪಂದ್ಯಗಳನ್ನು ಗೆದ್ದರೆ ಆಗ 11 ಅಂಕವಾಗುತ್ತದೆ. 4ನೇ ಸ್ಥಾನಿಯಾಗಿ ನಾಕೌಟ್ ಪ್ರವೇಶಿಸಬಹುದು. ಹೀಗಾಗಿ ಹೇಗಾದರೂ ಇಂಗ್ಲಂಡ್ ವಿರುದ್ಧ ಗೆದ್ದು ಬನ್ನಿ…’ ಎಂದು ಭಾರತವನ್ನು ವಿನಂತಿಸಿದ್ದಾರೆ ಅಖ್ತರ್. ಯೂಟ್ಯೂಬ್‌ಗ ಅಪ್‌ಲೋಡ್ ಮಾಡಿರುವ ಈ ವೀಡಿಯೊ ಈಗ ಚರ್ಚೆಗೆ ಗ್ರಾಸವಾಗಿದೆ.
“ಪಾಕಿಸ್ಥಾನ ಕ್ಷಿಪ್ರವಾಗಿ ಚೇತರಿಸಿಕೊಂಡು ಮೇಲೆದ್ದು ಬಂದಿದೆ. ಈಗ ಭಾರತೀಯರ ಸರದಿ. ನೀವು ನಮಗೆ ಸಹಾಯ ಮಾಡಿ. ಇಂಗ್ಲಂಡನ್ನು ಸೋಲಿಸಿ. ನಾವು ನಮ್ಮ 2 ಪಂದ್ಯಗಳನ್ನು ಗೆಲ್ಲುತ್ತೇವೆ. ಸೆಮಿಫೈನಲ್‌ನಲ್ಲಿ ಮತ್ತೊಮ್ಮೆ ಮುಖಾಮುಖೀಯಾಗೋಣ. ಆಗ ನಿಮ್ಮನ್ನು ಸೋಲಿಸುತ್ತೇವೆ’ ಎಂದು ಅಖ್ತರ್ ಈ ವೀಡಿಯೊದಲ್ಲಿ ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…