Featured

ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ : ಟ್ರಂಪ್ -Vishwanews24

ನ್ಯೂಯಾರ್ಕ್​: ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೌಡಿ ಮೋದಿಯಲ್ಲಿ ಪಾಲ್ಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಸೋಮವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಯುಎಸ್​ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ನಿನ್ನೆ ಕೂಡ ತಾವು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಮ್ರಾನ್​ ಖಾನ್​ ಜತೆಗಿನ ಮಾತುಕತೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್​, ಕಾಶ್ಮೀರದ ವಿಚಾರದಲ್ಲಿ ಸಹಾಯ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ನಾನು ಮಧ್ಯಸ್ಥಿಕೆ ವಹಿಸಬೇಕೋ ಬೇಡವೋ ಎಂಬುದು ನರೇಂದ್ರ ಮೋದಿ ಹಾಗೂ ಇಮ್ರಾನ್​ ಖಾನ್​ ಅವರ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದರು.

ನನಗೆ ಭಾರತದ ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಹಾಗೇ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಜತೆಗೂ ಉತ್ತಮ ಸ್ನೇಹವಿದೆ. ನಾನು ಮಧ್ಯಸ್ಥಿಕೆ ವಹಿಸಿದ ಯಾವುದೇ ವಿಚಾರದಲ್ಲೂ ಇದುವರೆಗೆ ವಿಫಲನಾಗಿಲ್ಲ. ಈ ಬಗ್ಗೆ ಮೊದಲೇ ಒಂದು ಬಾರಿ ತಿಳಿಸಿದ್ದೇನೆ. ಆದರೆ ಇನ್ನೊಂದು ಕಡೆಯಿಂದಲೂ ಒಪ್ಪಿಗೆ ಬೇಕು ಎಂದು  ಹೇಳಿದರು.

ಮೋದಿಯವರ ಈ ಮಾತುಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ ಟ್ರಂಪ್​, ನಿನ್ನೆ ಭಾರತ ನನ್ನ ಸಮ್ಮುಖದಲ್ಲೇ ಆಕ್ರಮಣಕಾರಿ ಹೇಳಿಕೆಯನ್ನು ನೀಡಿದೆ. ಅಂಥ ಒಂದು ದೃಢ ನಿರ್ಧಾರದ ಮಾತುಗಳನ್ನು ಭಾರತದಿಂದ ನಿರೀಕ್ಷೆ ಮಾಡಿರಲಿಲ್ಲ. ಅದೂ ಪ್ರಧಾನಿಯೇ ಹೇಳುತ್ತಾರೆ ಎಂದುಕೊಂಡಿರಲಿಲ್ಲ. ಅದರಲ್ಲೂ ಅಲ್ಲಿ ನೆರೆದಿದ್ದ 50,000 ಜನರು ಆ ಮಾತುಗಳನ್ನು ಸಂಪೂರ್ಣವಾಗಿ ಒಪ್ಪಿಕೊಂಡರು ಎಂದು ಟ್ರಂಪ್​ ತಿಳಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago