ರಾಜ್ಯ ನ್ಯೂಸ್

ಭಾರಿಮಳೆ : ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ; ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ – vishwanews24

ಭಾರಿಮಳೆ : ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ; ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ

ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ ಶಿಖರ ಎಂದೇ ಖ್ಯಾತಿಯಾಗಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿದಿದೆ.

ನಿತ್ಯ ನೂರಾರು ಪ್ರವಾಸಿಗರು ಓಡಾಡುವ ಪ್ರಸಿದ್ಧ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಚ್ಚು ಗುಡ್ಡದ ಮಣ್ಣು ರಸ್ತೆ ಮೇಲೆ ಕುಸಿದಿದೆ. ದುರದೃಷ್ಟವಶಾತ್ ಗುಡ್ಡ ಕುಸಿಯುವುದನ್ನು ತಡೆಯಲು ಕಾಂಕ್ರೀಟ್ ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.

ಇದನ್ನೂ ಓದಿ:

ಈ ಮಾರ್ಗವು ಅತ್ತಿಗುಂಡಿ, ಮಹಲ್ ಸೇರಿದಂತೆ ಹತ್ತಾರು ಹಳ್ಳಿಗಳನ್ನು ಸಂಪರ್ಕಿಸುವ ಮಾರ್ಗವಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನ ಕಾಫಿ ತೋಟಗಳಿಗೆ ನಿತ್ಯ ಸಾವಿರಾರು ಕೂಲಿ ಕಾರ್ಮಿಕರು ಕೂಡ ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ರಸ್ತೆಗೆ ಬಿದ್ದಿದ್ದ ಮಣ್ಣನ್ನ ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು ಭೂಮಿಯ ತೇವಾಂಶ ಹೆಚ್ಚಾಗಿ ಮತ್ತಷ್ಟು ಭಾಗಗಳಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಜಿಲ್ಲಾಡಳಿತ ಕೂಡ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಪ್ರವಾಸಿಗರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಓಡಾಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಇದನ್ನೂ ಓದಿ:

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago