2022ರ ವೇಳೆಗೆ ನವ ಭಾರತ ನಿರ್ಮಾಣ ಮಾಡುವ ತನ್ನ ವಚನಕ್ಕೆ ಪಕ್ಷ ಬದ್ಧವಾಗಿರುವುದಾಗಿ ರಾಷ್ಟ್ರೀಯ ಕಾರ್ಯಕಾರಿಣಿ ರಾಜಕೀಯ ನಿರ್ಣಯ ಕೈಗೊಂಡಿದೆ. ಬಡತನ, ಹಸಿವು, ಭ್ರಷ್ಟಾಚಾರ, ಜಾತೀಯತೆ, ಕೋಮುವಾದ ಮತ್ತು ಭಯೋತ್ಪಾದನೆ ಮುಕ್ತವಾದ ‘ನವ ಭಾರತ ನಿರ್ಮಾಣ’ ನಮ್ಮ ಗುರಿ ಎಂದು ಹೇಳಿದ್ದಾರೆ.
ಅಜೇಯ ಭಾರತ, ಅಟಲ್ ಭಾಜಪ : ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ‘ಅಜೇಯ ಭಾರತ, ಅಟಲ್ ಭಾಜಪ’ ಎಂಬ ಹೊಸ ಮಂತ್ರ ಜಪಿಸಿದೆ. ಎರಡನೇ ದಿನದ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಅವರು ಈ ಹೊಸ ಘೋಷಣೆ ಹುಟ್ಟು ಹಾಕಿದ್ದಾರೆ.
ಮೊದಲ ದಿನದ ಕಾರ್ಯಕಾರಿಣಿಯಲ್ಲಿ ‘ಅಜೇಯ ಬಿಜೆಪಿ’ ಎಂಬ ಧ್ಯೇಯವಾಕ್ಯವನ್ನು ಘೋಷಿಸಲಾಗಿತ್ತು. ಅದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರು ಸೇರಿಸುವ ಮೂಲಕ ಮೋದಿ ಅವರು ಧ್ಯೇಯವಾಕ್ಯವನ್ನು ಸ್ವಲ್ಪ ಮಾರ್ಪಾಡು ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮತ್ತೆ ವಾಜಪೇಯಿ ಅವರ ಹೆಸರಿಗೆ ಮೊರೆ ಹೊಗುವ ಸುಳಿವನ್ನು ಬಿಜೆಪಿ ನೀಡಿದೆ.
ನವ ಭಾರತ ನಿರ್ಮಾಣ: 2022ರ ವೇಳೆಗೆ ನವ ಭಾರತ ನಿರ್ಮಾಣ ಮಾಡುವ ತನ್ನ ವಚನಕ್ಕೆ ಬದ್ಧವಾಗಿರುವುದಾಗಿ ರಾಷ್ಟ್ರೀಯ ಕಾರ್ಯಕಾರಿಣಿ ರಾಜಕೀಯ ನಿರ್ಣಯ ಕೈಗೊಂಡಿದೆ.ಬಡತನ, ಹಸಿವು, ಭ್ರಷ್ಟಾಚಾರ, ಜಾತೀಯತೆ, ಕೋಮುವಾದ ಮತ್ತು ಭಯೋತ್ಪಾದನೆ ಮುಕ್ತವಾದ ‘ನವ ಭಾರತ ನಿರ್ಮಾಣ’ ತನ್ನ ಕನಸು ಎಂದು ಬಿಜೆಪಿ ಪುನರುಚ್ಚರಿಸಿದೆ.
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ, ಕುಸಿಯುತ್ತಿರುವ ರೂಪಾಯಿ ಮೌಲ್ಯ, ಹೆಚ್ಚುತ್ತಿರುವ ನಿರುದ್ಯೋಗ, ರಫೇಲ್ ಯುದ್ಧ ವಿಮಾನ ಹಗರಣದಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪ್ರಸ್ತಾಪವಾಗದಿರುವುದು ಆಶ್ಚರ್ಯ ಮೂಡಿಸಿದೆ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಒಣ ಘೋಷಣೆಗಳು ಮಾತ್ರ ಕೇಳಿ ಬರುತ್ತಿವೆ.
ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗದಿರುವುದು ವಿಷಾದನೀಯ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಮಾಕನ್ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಏರಿಕೆ, ರಫೇಲ್ ಯುದ್ಧ ವಿಮಾನ ಖರೀದಿ ಹಗರಣಗಳ ಕುರಿತು ಕೇಳಿದ ಪ್ರಶ್ನೆಗೆ ಸಚಿವರಾದ ಜಾವಡೇಕರ್, ರವಿಶಂಕರ್ ಪ್ರಸಾದ್ ಅವರು ಉತ್ತರಿಸದೆ ನುಣುಚಿಕೊಂಡಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.
ನಮಗೆ ಅಧಿಕಾರ ಆಸೆಯಾಗಲಿ, ದಾಹವಾಗಲಿ ಇಲ್ಲ. ಕುರ್ಚಿಯ ವ್ಯಾಮೋಹ ಕೂಡ ಇಲ್ಲ. ದೇಶ ಮತ್ತು ಜನರಿಗಾಗಿ ಕೆಲಸ ಮಾಡಲು ಅಧಿಕಾರ ಬೇಕು. ಅದಕ್ಕೆ ನಮಗೆ ಜನ ಅವಕಾಶ ನೀಡಿದ್ದಾರೆ. ಆ ನಂಬಿಕೆಯಿಂದ ಕೊಟ್ಟ ಅಧಿಕಾರವನ್ನ ಹುಸಿಗೊಳಿಸಬಾರದು : ನರೇಂದ್ರ ಮೋದಿ, ಪ್ರಧಾನಿ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…