Featured

ಭಾರಿ ಮಳೆ ಪ್ರವಾಹಕ್ಕೆ ತತ್ತರಿಸಿದ ಆಂಧ್ರ ಪ್ರದೇಶ ;  ಸಾವಿನ ಸಂಖ್ಯೆ 23ಕ್ಕೆ ಏರಿಕೆ, ನೂರಾರು ಮಂದಿ  ನಾಪತ್ತೆ – Vishwanews24

ಭಾರಿ ಮಳೆ ಪ್ರವಾಹಕ್ಕೆ ತತ್ತರಿಸಿದ ಆಂಧ್ರ ಪ್ರದೇಶ ;  ಸಾವಿನ ಸಂಖ್ಯೆ 23ಕ್ಕೆ ಏರಿಕೆ, ನೂರಾರು ಮಂದಿ  ನಾಪತ್ತೆ – Vishwanews24

ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಅನ್ನಮಯ್ಯ ನೀರಾವರಿ ಯೋಜನೆಗೂ ಪ್ರವಾಹದಿಂದ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಡಪ ವಿಮಾನ ನಿಲ್ದಾಣವನ್ನು ನವೆಂಬರ್ 25 ರವರೆಗೆ ಮುಚ್ಚಲಾಗಿದೆ.

ತಿರುಪತಿಯಲ್ಲಿ ಪ್ರವಾಹ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ತಿರುಮಲಕ್ಕೆ ಸಂಪರ್ಕ ಕಲ್ಪಿಸುವ ಘಾಟ್ ರಸ್ತೆಗಳನ್ನು ಮುಚ್ಚಲಾಗಿದೆ. ಅಲ್ಲದೆ ತಿರುಮಲ ನಡಿಗೆ ಮಾರ್ಗವನ್ನೂ ಬಂದ್ ಮಾಡಲಾಗಿದ್ದು, ಯಾತ್ರಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮಳೆಯಿಂದಾಗಿ ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದ್ದು, ಹಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅಲ್ಲದೆ ದನಕರುಗಳೂ ಕೂಡ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

4 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

9 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

9 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

9 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago