ಮಂಗಳೂರು: ಭಾರೀ ಗಾಳಿ-ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಜು.24 ರಂದು ರಜೆ ಘೋಷಿಸಲಾಗಿದೆ.
ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದೆಂದು ಸೂಚಿಸಲಾಗಿದೆ.
ತಾಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ, ಹಳ್ಳಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಸಂಭಾವ್ಯ ಹಾನಿಯ ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ತಾಲೂಕು ಆಡಳಿತದ ಸೂಚನೆಗಳ ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ತಹಸೀಲ್ದಾರರು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…