Featured

ಭಾರೀ ಗುಡ್ಡ ಕುಸಿತ: ಐವರು ಮಣ್ಣನಡಿ ಸಿಲುಕಿರುವ ಶಂಕೆ – vishwanews24

ಅಂಕೋಲಾದ ಶಿರೂರು ಬಳಿ  ಭಾರೀ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಮಣ್ಣಿನಡಿ ಸಿಲುಕಿರುವ ಶಂಕೆ

ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನಿರಾಕಾರ ದೇವಾಲುದ ಬಳಿ ಸಹ ಗುಡ್ಡ ಕುಸಿತವಾಗಿದ್ದು, ಪಕ್ಕದಲ್ಲೆ ಇದ್ದ ಹಂಚಿನ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯವರು ಇಲ್ಲಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago