ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ.
ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಇಂದೂ ಕೂಡಾ ರೆಡ್ ಅಲರ್ಟ್ ಜಾರಿಯಾಗಿದೆ. ಬಿಟ್ಟು ಬಿಡದೇ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿಯುತ್ತಿದೆ.
ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್‌ಡಿಆರ್‌ಎಫ್ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.
5 ದಿನಗಳ ಕಾಲ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿರುವ ಕಾರಣ ಅಪಾಯದಲ್ಲಿರುವ ಗುಡ್ಡ ಭಾಗದ ನಿವಾಸಿಗಳನ್ನು ಸ್ಥಳಾಂತರ ಮಾಡುವಂತೆ ಆದೇಶಿಸಲಾಗಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ಬೋಟ್‌ಗಳು ತಕ್ಷಣ ದಡಕ್ಕೆ ಬಂದು ನವಮಂಗಳೂರು ಬಂದರಿನಲ್ಲಿ ಲಂಗರು ಹಾಕಲು ಅನುಮತಿ ನೀಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…