ಮುಂಬೈ : ಮಹಾನಗರಿ ಮುಂಬೈನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಬೈ, ಥಾಣೆ ಮತ್ತು ಕೊಂಕಣ ಪ್ರದೇಶದ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಮುಂಬೈ ಸೇರಿದಂತೆ ಮಹಾರಾಷ್ಟ್ರದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ರೈಲು ಮತ್ತು ವಿಮಾನ ಹಾರಾಟ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ. ಹಲವು ಕಡೆಗಳಲ್ಲಿ ಪ್ರವಾಹವಾಗಿದೆ. ಮುಂದಿನ 48 ಗಂಟೆಗಳ ಕಾಲ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ನೀರು ನಿಂತಿರುವುದರಿಂದ ಹಲವು ರೈಲುಗಳನ್ನು ಸ್ಥಗಿತ ಮಾಡಲಾಗಿದೆ. ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರನ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮುಂಬೈ, ಥಾಣೆ, ಪಾಲ್ಘಾರ್, ರಾಯ್ ಗಡ್ ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…