ಮಂಗಳೂರು : ಎಲ್ಲೆಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಆರಂಭವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಸೋಮವಾರ ರಾತ್ರಿಯಿಂದ ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ನೀರು, ತಿಂಡಿ ಸಿಗದೇ ಪರದಾಡುವಂತ ಸ್ಥಿತಿ ಉಂಟಾಗಿದೆ.
ಒಟ್ಟು 9 ಕಡೆ ಗುಡ್ಡ ಕುಸಿದಿದ್ದು, ಇನ್ನು ಕೆಲವೆಡೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಎರಡು ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವಿಗೆ ಜೆಸಿಬಿ, ಹಿಟಾಚಿಗಳನ್ನು ಸ್ಥಳಕ್ಕೆ ತರಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ.
ಮಳೆಯಿಂದಾಗಿ ಮಣ್ಣು ತೆರವು ಕಾರ್ಯ ವಿಳಂಬವಾಗುತ್ತಿದೆ. ಆದರೂ ಮಣ್ಣು ತೆರವು ಮಾಡಲು ನಿರಂತರ ಕೆಲಸ ಮಾಡಲಾಗುತ್ತಿದೆ. ಮಣ್ಣು ಕುಸಿತದಿಂದ ಹಾಸನ ಮಾರ್ಗದ ರೈಲು ಸಂಚಾರ ಸೋಮವಾರದಿಂದ ಸ್ಥಗಿತಗೊಂಡಿತ್ತು, ಈಗ ರಸ್ತೆ ಸಂಚಾರವೂ ಸ್ಥಗಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಡ್ಡ ಕುಸಿತದಿಂದ ವಾಹನಗಳು ಸರದಿಯಲ್ಲಿ ನಿಂತಿದ್ದು, ಜನರಿಗೆ ಆಹಾರದ ವ್ಯವಸ್ಥೆ ಮಾಡಲಾಗಿತ್ತು, ಆದರೆ ಜನರ ಸಂಖ್ಯೆ ಹೆಚ್ಚಾಗಿದ್ದರಿಂದ ಎಲ್ಲರಿಗೂ ತಿಂಡಿ, ನೀರು ಒದಗಿಸುವುದು ಕಷ್ಟಕರವಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…