Featured

ಭಾರೀ ಮಳೆಯಿಂದ ತತ್ತರಿಸಿದ ತಮಿಳುನಾಡು ; ರೆಡ್ ಅಲರ್ಟ್ ಫೋಷಣೆ – Vishwanews24

ಭಾರೀ ಮಳೆಯಿಂದ ತತ್ತರಿಸಿದ ತಮಿಳುನಾಡು ; ರೆಡ್ ಅಲರ್ಟ್ ಫೋಷಣೆ – Vishwanews24

ಚೆನ್ನೈ: ಭಾರೀ ಮಳೆಯಿಂದ ತತ್ತರಿಸಿ ಹೋಗಿರುವ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಫೋಷಣೆ ಮಾಡಿದೆ.

ಬುಧವಾರ ಮತ್ತು ಗುರುವಾರದಂದು ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಡಿಮೆ ಒತ್ತಡ ಕರಾವಳಿಯನ್ನು ತಲುಪುತ್ತಿದ್ದು, ಗುರುವಾರ ರಾತ್ರಿಯವರೆಗೂ ಚೆನ್ನೈ ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗಬಹುದು. ಬುಧವಾರ ಮತ್ತು ಗುರುವಾರ 20 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಎರಡು ದಿನಗಳ ಕಾಲ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್‍ಗೆ ತಲುಪಬಹುದು ಎಂದು ಇಲಾಖೆ ವರದಿ ಮಾಡಿದೆ.

ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪ್ರವಾಹದ ನಂತರ, ಹಲವಾರು ಜನರು ಪರಿಹಾರ ಶಿಬಿರಗಳಲ್ಲಿ ಉಳಿದುಕೊಂಡಿದ್ದಾರೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಆ ಜನರನ್ನು ಮನೆಗಳಿಗೆ ಸ್ಥಳಾಂತರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸುಮಾರು 848 ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಕೂಡ ಚೆನ್ನೈನ ಒಂಬತ್ತು ಸ್ಥಳಗಳಲ್ಲಿ 16 ಬೀದಿಗಳು ನೀರಿನಿಂದ ಜಲಾವೃತವಾಗಿದ್ದು, ನೀರನ್ನು ಪಂಪ್ ಮಾಡಿ ಹೊರತೆಗೆಯಲಾಗುತ್ತಿದೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್‍ನ ಹಿರಿಯ ಅಧಿಕಾರಿಗಳು, ನೀರನ್ನು ಹೊರ ತೆಗೆಯಲು 426 ಪಂಪ್‍ಗಳನ್ನು ಬಳಸಲಾಗಿದೆ. ರಂಗರಾಜಪುರಂ ಸುರಂಗಮಾರ್ಗವು ಜಲಾವೃತಗೊಂಡು ಮುಚ್ಚಲ್ಪಟ್ಟಿತು. ಅದಕ್ಕೆ ನೀರನ್ನು ಹೊರ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

9 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

9 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

9 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

9 hours ago