ಬೆಂಗಳೂರು: ಇಂದಿನಿಂದ (ಭಾನುವಾರ) ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ಮುಂದಿನ ಮೂರ್ನಾಲ್ಕು ದಿನವೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, 3,4 ಮತ್ತು 5ನೇ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ‘
ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಾಳೆ (ಸೋಮವಾರ) ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…