ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ 20.07.2019 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದ, ಅಲ್ಲದೆ ಮುಂಗಾರು ಮಳೆ ಮತ್ತಷ್ಟು ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ದಿನಾಂಕ 20.07.2019 ರಿಂದ 22.07.2019 ರವರೆಗೆ ಜಿಲ್ಲೆಯಲ್ಲಿ ಪ್ರತಿದಿನ 200 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದ್ದು, ಕೇಂದ್ರ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಿನಾಂಕ 20 ರಿಂದ 22 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ನೀರು ತುಂಬುವ ತಗ್ಗು ಪ್ರದೇಶ, ಕೆರೆ, ಸಮುದ್ರಕ್ಕೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ರೆಡ್ ಆಲರ್ಟ್ ಘೋಷಣೆ ಆಗಿರುವ ಹಿನ್ನಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ಅಲ್ಲದೆ ದ.ಕ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಪದವಿ ಪೂರ್ವ ಎಲ್ಲಾ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸುವಂತೆ ಆದೇಶಿಸಿದ್ದಾರೆ. ಇದಲ್ಲದೆ ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು ಎಚ್ಚರ ವಹಿಸುವಂತೆ ಹಾಗೂ ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…