Featured

ಭಾರೀ ಮಳೆ :  ಜೂ.17ರಂದು ಕರಾವಳಿ  ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ – vishwanews24

ಭಾರೀ ಮಳೆ :  ಜೂ.17ರಂದು ಕರಾವಳಿ  ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ.17ರಂದು) ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 16 ರಿಂದ 20ರ ವರೆಗೆ ವ್ಯಾಪಕವಾಗಿ ಮಳೆಯಾದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜೂನ್‌ 17ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ಜೂನ್‌ 17ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜೂನ್‌ 18 ರಿಂದ ಕರ್ನಾಟಕ ರಾಜ್ಯಾದ್ಯಂತ ಮಳೆಯ ತೀವ್ರತೆ ಹಾಗೂ ವಿಂಗಡಣೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಜೂನ್‌ 17ರಂದು ಬೆಂಗಳೂರಿನ ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್‌.ಪಾಟೀಲ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago