ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ.17ರಂದು) ರೆಡ್ ಅಲರ್ಟ್ ಘೋಷಿಸಲಾಗಿದೆ.
ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16 ರಿಂದ 20ರ ವರೆಗೆ ವ್ಯಾಪಕವಾಗಿ ಮಳೆಯಾದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜೂನ್ 17ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ಜೂನ್ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 18 ರಿಂದ ಕರ್ನಾಟಕ ರಾಜ್ಯಾದ್ಯಂತ ಮಳೆಯ ತೀವ್ರತೆ ಹಾಗೂ ವಿಂಗಡಣೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಜೂನ್ 17ರಂದು ಬೆಂಗಳೂರಿನ ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್.ಪಾಟೀಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…