ಭಾರೀ ಮಳೆ : ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ – vishwanews24
ಭಾರೀ ಮಳೆ : ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುಖ್ಯವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ (ಜುಲೈ 5) ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಮಳೆ ಹೆಚ್ಚಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ನೆರೆ ಸಂಬಂಧಿತ ಜನರ ನೆರವಿಗೆ ಬರಲು ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ.
