ಮಂಗಳೂರು : ವಿಪರೀತ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಯನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ಸಮುದ್ರ ತೀರ ಮತ್ತು ನದಿ ದಡಗಳಿಗೆ ಹೋಗದಂತೆ ನೋಡಿಕೊಳ್ಳಲು ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…