Featured

ಭಾರೀ ಮಳೆ , ಪಂಪಾ ನದಿಯಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟ : ಶಬರಿಮಲೆ ಯಾತ್ರೆ ಸ್ಥಗಿತ – Vishwanews24

ಭಾರೀ ಮಳೆ , ಪಂಪಾ ನದಿಯಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟ : ಶಬರಿಮಲೆ ಯಾತ್ರೆ ಸ್ಥಗಿತ – Vishwanews24

ಪತ್ತನಂತಿಟ್ಟ, : ಭಾರೀ ಮಳೆ ಮತ್ತು ಪಂಬಾ ಸೇರಿದಂತೆ ಪ್ರಮುಖ ನದಿಗಳಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದ ಕೇರಳದ ಪತ್ತನಂತಿಟ್ಟದಲ್ಲಿರುವ ಶಬರಿಮಲೆಯ ಅಯ್ಯಪ್ಪ ದೇಗುಲದ ಯಾತ್ರೆಯನ್ನು ಶನಿವಾರ ಸ್ಥಗಿತಗೊಳಿಸಲಾಗಿದೆ.

ಪತ್ತನಂತಿಟ್ಟ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಪಂಭಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಕ್ಕಿ-ಆನಾತೋಡ್ ಜಲಾಶಯ (ಗೇಟ್‌ಗಳು ತೆರೆದು) ಮತ್ತು ಪಂಬಾ ಅಣೆಕಟ್ಟುಗಳ ತೀರಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಪಂಬಾ ಮತ್ತು ಶಬರಿಮಲೆಗೆ ಯಾತ್ರೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಶುಕ್ರವಾರ ಆದೇಶದಲ್ಲಿ ತಿಳಿಸಿದ್ದಾರೆ.

ವರ್ಚುವಲ್ ಕ್ಯೂ ಸಿಸ್ಟಮ್ ಮೂಲಕ ಅಯ್ಯಪ್ಪನ ದರ್ಶನಕ್ಕೆ ಮುಂಚಿತವಾಗಿ ಕಾಯ್ದಿರಿಸಿದ ಯಾತ್ರಾರ್ಥಿಗಳಿಗೆ ಹವಾಮಾನ ಅನುಕೂಲಕರವಾದ ಬಳಿಕ “ದರ್ಶನ” (ವೀಕ್ಷಣೆ) ಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ತಿಳಿಸಿದ್ದಾರೆ.

ಕೇರಳದಲ್ಲಿ ವಿಪರೀತ ಮಳೆಯಿದ್ದರೂ ನೂರಾರು ಭಕ್ತರು ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಶಬರಿಮಲೆ ಬೆಟ್ಟವನ್ನು ಹತ್ತಿ ಚಾರಣ ಮಾಡುತ್ತಿದ್ದಾರೆ. ಎರಡು ತಿಂಗಳ ಕಾಲ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ನವೆಂಬರ್ 16ರಂದು ಶಬರಿಮಲೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

6 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

11 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

11 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

11 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago