ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು  ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ: 

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಎಚ್ಚರಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: 

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

Leave a Reply