ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಇದನ್ನೂ ಓದಿ:
ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಎಚ್ಚರಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ:
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…