ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಿಸಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಪೋಷಕರು ಹಾಗೂ ಸಾರ್ವಜನಿಕರು ಅಗತ್ಯವಿಲ್ಲದೆ ಹೊರಗಡೆ ಸಂಚರಿಸದಂತೆ, ತಗ್ಗು ಪ್ರದೇಶಗಳು, ನದಿ ತೀರ ಹಾಗೂ ಸಮುದ್ರ ತೀರದ ಭಾಗಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…
ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…
ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…
ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…