ಹಾಸನ : ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಹಲವೆಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎನ್ನಲಾಗುತ್ತಿದೆ.
ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ ಅಪಾರ ಪ್ರಮಾಣದ ಮಣ್ಣು ಮತ್ತು ಬೃಹತ್ ಬಂಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನೂರಾರು ಅಡಿ ಎತ್ತರದ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ರಸ್ತೆಯ ಬದಿಯಲ್ಲಿ ಚರಂಡಿ ನಿರ್ಮಿಸದ ಕಾರಣ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಶಿರಾಡಿಘಾಟ್‌ನ ರಾಷ್ಟ್ರೀಯ ಹೆದ್ದಾರಿ 75 ಸುರಕ್ಷತೆಗೆ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದೆ. ಜುಲೈನಲ್ಲಿ ಮಳೆಗೆ ಸ್ವಲ್ಪ ಪ್ರಮಾಣದಲ್ಲಿ ತಡೆಗೋಡೆ ಕುಸಿತವಾಗಿತ್ತು. ಇದೀಗ 100 ಮೀಟರ್ ವರೆಗೆ ತಡೆಗೋಡೆ ಕುಸಿದಿದೆ. ಮತ್ತೆ ಮಳೆ ಹೆಚ್ಚಾದರೆ ರಸ್ತೆಯೇ ಕುಸಿದು ಬೀಳುವ ಆತಂಕ ಎದುರಾಗಿದೆ.
ಇನ್ನು, ಭಾರಿ ಮಳೆಯಿಂದ ಶಿರಾಡಿಘಾಟ್ ಭಾಗದ ಕಾಫಿ ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಚತುಷ್ಪತ ರಸ್ತೆ ನಿರ್ಮಾಣಕ್ಕಾಗಿ ಕಡಿದಾಗಿ ಮಣ್ಣು ತೆಗೆದು ರಸ್ತೆ ನಿರ್ಮಿಸಿದ್ದರಿಂದ ಭೂಮಿ ಕೊಚ್ಚಿಹೋಗಿ ಕಾಫಿ ಬೆಳೆಗಾರರಿಗೆ ಅಪಾರ ಪ್ರಮಾಣದ ನಷ್ಟವುಂಟಾಗುತ್ತಿದೆ. ಪ್ರತಿಬಾರಿ ಮಳೆ ಹೆಚ್ಚಾದಾಗ ಕಾಫಿ ಗಿಡಗಳು ನಾಶವಾಗುವುದರ ಜೊತೆಗೆ ಸಿಲ್ವರ್ ಮರಗಳು ಕೂಡ ಕುಸಿಯುತ್ತಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…