Featured

ಭಾರೀ ಮಳೆ : ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ; ರಸ್ತೆಗೆ ಕುಸಿದು ಬಿದ್ದ ಮಣ್ಣು, ಬೃಹತ್ ಬಂಡೆ – vishwanews24

ಭಾರೀ ಮಳೆ : ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ; ರಸ್ತೆಗೆ ಕುಸಿದು ಬಿದ್ದ ಮಣ್ಣು, ಬೃಹತ್ ಬಂಡೆ

ಹಾಸನ : ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಹಲವೆಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎನ್ನಲಾಗುತ್ತಿದೆ.

ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ ಅಪಾರ ಪ್ರಮಾಣದ ಮಣ್ಣು ಮತ್ತು ಬೃಹತ್ ಬಂಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೂರಾರು ಅಡಿ ಎತ್ತರದ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ರಸ್ತೆಯ ಬದಿಯಲ್ಲಿ ಚರಂಡಿ ನಿರ್ಮಿಸದ ಕಾರಣ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಶಿರಾಡಿಘಾಟ್‌ನ ರಾಷ್ಟ್ರೀಯ ಹೆದ್ದಾರಿ 75 ಸುರಕ್ಷತೆಗೆ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದೆ. ಜುಲೈನಲ್ಲಿ ಮಳೆಗೆ ಸ್ವಲ್ಪ ಪ್ರಮಾಣದಲ್ಲಿ ತಡೆಗೋಡೆ ಕುಸಿತವಾಗಿತ್ತು. ಇದೀಗ 100 ಮೀಟರ್ ವರೆಗೆ ತಡೆಗೋಡೆ ಕುಸಿದಿದೆ. ಮತ್ತೆ ಮಳೆ ಹೆಚ್ಚಾದರೆ ರಸ್ತೆಯೇ ಕುಸಿದು ಬೀಳುವ ಆತಂಕ ಎದುರಾಗಿದೆ.

ಇನ್ನು, ಭಾರಿ ಮಳೆಯಿಂದ ಶಿರಾಡಿಘಾಟ್ ಭಾಗದ ಕಾಫಿ ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಚತುಷ್ಪತ ರಸ್ತೆ ನಿರ್ಮಾಣಕ್ಕಾಗಿ ಕಡಿದಾಗಿ ಮಣ್ಣು ತೆಗೆದು ರಸ್ತೆ ನಿರ್ಮಿಸಿದ್ದರಿಂದ ಭೂಮಿ ಕೊಚ್ಚಿಹೋಗಿ ಕಾಫಿ ಬೆಳೆಗಾರರಿಗೆ ಅಪಾರ ಪ್ರಮಾಣದ ನಷ್ಟವುಂಟಾಗುತ್ತಿದೆ. ಪ್ರತಿಬಾರಿ ಮಳೆ ಹೆಚ್ಚಾದಾಗ ಕಾಫಿ ಗಿಡಗಳು ನಾಶವಾಗುವುದರ ಜೊತೆಗೆ ಸಿಲ್ವರ್ ಮರಗಳು ಕೂಡ ಕುಸಿಯುತ್ತಿವೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago