Featured

ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ :  ಇಬ್ಬರು ಬಾಲಕಿಯರು ಸಾವು  – Vishwanews24

ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ :  ಇಬ್ಬರು ಬಾಲಕಿಯರು ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಶ್ರುತಿ(11), ಜ್ಞಾನಶ್ರೀ(6) ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಕುಮಾರಧಾರಾ ಬಳಿಯಿರುವ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಕುಸುಮಧಾರ, ರೂಪಶ್ರೀ ದಂಪತಿಯ ಇಬ್ಬರು ಪುತ್ರಿಯರು ಮೃತಪಟ್ಟಿದ್ದಾರೆ.

ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಸಂಜೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಸಂಜೆ 7 ಗಂಟೆ ಸುಮಾರಿಗೆ ಒಮ್ಮೆಲೇ ಭಾರೀ ಜೋರಾದ ಶಬ್ದ ಕೇಳಿಸಿತ್ತು. ಈ ವೇಳೆ ಮನೆಯ ಜಗಲಿಯಲ್ಲಿ ಓದುತ್ತಿದ್ದ ಶ್ರುತಿ ಪುಸ್ತಕವನ್ನು ಅಲ್ಲಿಯೇ ಬಿಟ್ಟು ಶಬ್ದ ಮನೆಯ ಒಳಗಿಂದ ಬಂದಿರಬಹುದು ಎಂದು ಅತ್ತ ಓಡಿದಳು. ಜ್ಞಾನಶ್ರೀ ಮನೆಯ ಒಳಗೆ ಚಾವಡಿಯಲ್ಲಿದ್ದು ದೊಡ್ಡವಳು ಕೂಡ ಅಲ್ಲಿಗೆ ತಲುಪಿದ್ದರು. ಇದೇ ಸಂದರ್ಭ ಗುಡ್ಡ ಮನೆಯ ಮೇಲೆಯೇ ಕುಸಿಸಿದೆ. ಅಡುಗೆಯಲ್ಲಿ ನಿರತರಾಗಿದ್ದ ತಾಯಿ ಅದೇ ಕ್ಷಣ ಶಬ್ದಕ್ಕೆ ಹೆದರಿ ಮಕ್ಕಳು ಹೊರಗಿದ್ದಾರೆ ಎಂದು ಹೊರಗಡೆ ಬಂದಿದ್ದಾರೆ.

ಇನ್ನು ಭಾರೀ ಮಳೆಯಿಂದಾಗಿ ಮರ ಬಿದ್ದು ಹಾಗೂ ನೀರು ಉಕ್ಕಿ ಹರಿದು ಸಂಪರ್ಕ ಸಾಧ್ಯವಿರುವ ಎರಡು ಕಡೆಯಿಂದಲೂ ರಸ್ತೆ ಸಂಪೂರ್ಣವಾಗಿ ಬಂದ್‌ ಆಗಿದ್ದರಿಂದ ಘಟನ ಸ್ಥಳಕ್ಕೆ ಶೀಘ್ರ ತೆರಳಲು ಸಾಧ್ಯವಾಗಿರಲಿಲ್ಲ. ತಡರಾತ್ರಿ ಸುರಿಯುತ್ತಿದ್ದ ಮಳೆಯೂ ರಕ್ಷಣ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ‌ ಕಾರ್ಯಾಚರಣೆಯ ಬಳಿಕ ಮೇಲ ಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂನಲ್ಲಿ ನೀರು ತುಂಬಿತ್ತು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

7 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

7 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago