ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಶ್ರುತಿ(11), ಜ್ಞಾನಶ್ರೀ(6) ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಕುಮಾರಧಾರಾ ಬಳಿಯಿರುವ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಕುಸುಮಧಾರ, ರೂಪಶ್ರೀ ದಂಪತಿಯ ಇಬ್ಬರು ಪುತ್ರಿಯರು ಮೃತಪಟ್ಟಿದ್ದಾರೆ.
ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಸಂಜೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಸಂಜೆ 7 ಗಂಟೆ ಸುಮಾರಿಗೆ ಒಮ್ಮೆಲೇ ಭಾರೀ ಜೋರಾದ ಶಬ್ದ ಕೇಳಿಸಿತ್ತು. ಈ ವೇಳೆ ಮನೆಯ ಜಗಲಿಯಲ್ಲಿ ಓದುತ್ತಿದ್ದ ಶ್ರುತಿ ಪುಸ್ತಕವನ್ನು ಅಲ್ಲಿಯೇ ಬಿಟ್ಟು ಶಬ್ದ ಮನೆಯ ಒಳಗಿಂದ ಬಂದಿರಬಹುದು ಎಂದು ಅತ್ತ ಓಡಿದಳು. ಜ್ಞಾನಶ್ರೀ ಮನೆಯ ಒಳಗೆ ಚಾವಡಿಯಲ್ಲಿದ್ದು ದೊಡ್ಡವಳು ಕೂಡ ಅಲ್ಲಿಗೆ ತಲುಪಿದ್ದರು. ಇದೇ ಸಂದರ್ಭ ಗುಡ್ಡ ಮನೆಯ ಮೇಲೆಯೇ ಕುಸಿಸಿದೆ. ಅಡುಗೆಯಲ್ಲಿ ನಿರತರಾಗಿದ್ದ ತಾಯಿ ಅದೇ ಕ್ಷಣ ಶಬ್ದಕ್ಕೆ ಹೆದರಿ ಮಕ್ಕಳು ಹೊರಗಿದ್ದಾರೆ ಎಂದು ಹೊರಗಡೆ ಬಂದಿದ್ದಾರೆ.
ಇನ್ನು ಭಾರೀ ಮಳೆಯಿಂದಾಗಿ ಮರ ಬಿದ್ದು ಹಾಗೂ ನೀರು ಉಕ್ಕಿ ಹರಿದು ಸಂಪರ್ಕ ಸಾಧ್ಯವಿರುವ ಎರಡು ಕಡೆಯಿಂದಲೂ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಘಟನ ಸ್ಥಳಕ್ಕೆ ಶೀಘ್ರ ತೆರಳಲು ಸಾಧ್ಯವಾಗಿರಲಿಲ್ಲ. ತಡರಾತ್ರಿ ಸುರಿಯುತ್ತಿದ್ದ ಮಳೆಯೂ ರಕ್ಷಣ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲ ಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂನಲ್ಲಿ ನೀರು ತುಂಬಿತ್ತು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…