ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU), ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…