Featured

ಭಾವನಾತ್ಮಕ ಹಾಗೂ ಸುಳ್ಳು ಪ್ರಚಾರದೊಂದಿಗೆ ಚುನಾವಣೆ ಎದುರಿಸುವ ಬಿಜೆಪಿಯವರ ತಂತ್ರ ಈ ಬಾರಿ ನಡೆಯುವುದಿಲ್ಲ : ವಿನಯಕುಮಾರ್ ಸೊರಕೆ – Vishwanews24

ಭಾವನಾತ್ಮಕ ಹಾಗೂ ಸುಳ್ಳು ಪ್ರಚಾರದೊಂದಿಗೆ ಚುನಾವಣೆ ಎದುರಿಸುವ ಬಿಜೆಪಿಯವರ ತಂತ್ರ ಈ ಬಾರಿ ನಡೆಯುವುದಿಲ್ಲ : ವಿನಯಕುಮಾರ್ ಸೊರಕೆ

ಗ್ರಾಮ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಕಾಂಗ್ರೆಸ್ ಪ್ರಯತ್ನ ನಡೆಸಲಿದೆ ..

ಕುಂದಾಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.60 ರಷ್ಟು ಅನುದಾನಗಳು ಗ್ರಾಮ ಪಂಚಾಯಿತಿಗಳ ಮೂಲಕವೇ ಅನುಷ್ಠಾನವಾಗುವುದರಿಂದ ರಾಜಕೀಯ ಪಕ್ಷಗಳಿಗೆ ಅತ್ಯಂತ ಪ್ರಾಮುಖ್ಯ ಚುನಾವಣೆ ಇದಾಗಿರುವುದ್ದು, ಗ್ರಾಮ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಪಕ್ಷ ಪ್ರಯತ್ನ ನಡೆಸಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಭರವಸೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಆರ್‌ಎನ್‌ಶೆಟ್ಟಿ ಸಭಾಂಗಣದ ಮಿನಿ ಹಾಲ್‌ನಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ನೇತ್ರತ್ವದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ಹೆಸರಿನಲ್ಲಿ ಭೃಷ್ಟಾಚಾರ ಮಾಡಿರುವುದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ. ಜಾಗಟೆ ಬಾರಿಸುವುದು, ದೀಪ ಹಚ್ಚುವುದು, ಚಪ್ಪಾಳೆ ತಟ್ಟುವುದರಿಂದ ಕೊರೊನಾ ನಿಯಂತ್ರಣವಾಗಲೇ ಇಲ್ಲ. ಸಿದ್ಧರಾಮಯ್ಯ ಸರ್ಕಾರ ನೀಡಿದ ಅನ್ನಭಾಗ್ಯದ ಸಹಾಯ ದೊರಕದೆ ಇದ್ದರೆ ಎಷ್ಟೋ ಜನರು ಉಪವಾಸ ಬೀಳುವ ಸಾಧ್ಯತೆಗಳಿದ್ದವು.

ಭಾವನಾತ್ಮಕ ಹಾಗೂ ಸುಳ್ಳು ಪ್ರಚಾರದೊಂದಿಗೆ ಚುನಾವಣೆ ಎದುರಿಸುವ ಬಿಜೆಪಿಯವರ ತಂತ್ರ ಈ ಬಾರಿ ನಡೆಯುವುದಿಲ್ಲ. ಕಳೆದ 45 ವರ್ಷಗಳಲ್ಲಿ ಕಾಣದ ಆರ್ಥಿಕ ಅವನತಿ ದೇಶದಲ್ಲಿ ಕಾಣುತ್ತಿದೆ. ರೈತರ ಪರಿಸ್ಥಿತಿ ಶೋಚನೀಯವಾಗಿದೆ. ಅಮೂಲ್ಯವಾದ ಸರ್ಕಾರಿ ಆಸ್ತಿಗಳನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗುತ್ತಿದೆ. ಧರ್ಮ–ಜಾತಿಯ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸ ಆಗುತ್ತಿದೆ. ಕೆ.ಪ್ರತಾಪ್ಚಂದ್ರ ಶೆಟ್ಟಿಯವರ ನಾಯಕತ್ವದಲ್ಲಿ ವರಾಹಿ ನೀರು ತರುವುದು, ಪುರಸಭೆಯ ಅಭಿವೃದ್ಧಿಯೂ ಸೇರಿ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ನೀಡಿದೆ. ದೇಶದಲ್ಲಿ ನಡೆಯುವ ವಾಸ್ತಾವಿಕ ವಿಚಾರಗಳನ್ನು ಕಾರ್ಯಕರ್ತರ ಮೂಲಕ ಗ್ರಾಮದ ಪ್ರತಿ ಮತದಾರರಿಗೂ ಮುಟ್ಟಿಸುವ ಕೆಲಸ ಆಗಬೇಕು. ನಾವು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದನ್ನ ಮಾತ್ರ ಮಾಡುತ್ತೇವೆ. ಆದರೆ ಪ್ರತಿ ಪಕ್ಷದವರು ಅಭ್ಯರ್ಥಿಯನ್ನು ಕದಿಯುವುದರ ಜತೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಹೇಗೆ ಸೋಲಿಸಬೇಕು ಎನ್ನುವ ಷಡ್ಯಂತ್ರವನ್ನು ಮಾಡುತ್ತಾರೆ. 23 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಆದ್ಯತೆ ನೀಡಬೇಕು ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಪ್ರಾಸ್ತಾವಿಕ ಮಾತನಾಡಿದರು. ಪಕ್ಷದ ಪ್ರಮುಖರಾದ ಮಲ್ಯಾಡಿ ಶಿವರಾಮ ಶೆಟ್ಟಿ. ಬಿ.ಹಿರಿಯಣ್ಣ ಚಾತ್ರಬೆಟ್ಟು. ಶ್ಯಾಮಲಾ ಭಂಡಾರಿ. ದೇವಾನಂದ ಶೆಟ್ಟಿ. ಜ್ಯೋತಿ ವಿ ಪುತ್ರನ್. ದೇವಕಿ ಪಿ ಸಣ್ಣಯ್ಯ. ಗಣೇಶ್ ಶೇರುಗಾರ. ಅಶೋಕ ಪೂಜಾರಿ ಬೀಜಾಡಿ. ಇಚ್ಛಿತಾರ್ಥ. ಜಾನಕಿ ಬಿಲ್ಲವ ಇದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ ಕ್ರಾಸ್ಟೋ ನಿರೂಪಿಸಿದರು. ಖಜಾಂಜಿ ನಾರಾಯಣ ಆಚಾರ್ ಕೋಣಿ ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago