Featured

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ..

ವಿದ್ಯಾಭ್ಯಾಸ ಮಾಡುತ್ತಿರುವ ಮೃತರ ಮಕ್ಕಳಿಗೆ ಸರ್ಕಾರಿ ಕೆಲಸ : ಈಶ್ವರ್ ಖಂಡ್ರೆ ಭರವಸೆ

ಬೀದರ್: ತೆಲಂಗಾಣದಲ್ಲಿ ಸಂಭವಿಸಿದ ಅಫಘಾತದಲ್ಲಿ ಮೃತರಾದ ಬೀದರ್‌  ಮೂಲದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕೂಲಿಗೆ ಹೋದವರು ಆರು ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬದ ಜೊತೆ ಇದ್ದು, ಪರಿಹಾರ ನೀಡತ್ತಿದೆ. ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ನೀಡಲಿ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುತ್ತೇವೆ. ಮೃತ ಆರು ಜನಕ್ಕೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

ನಾನು ವೈಯಕ್ತಿಕ ಪರಿಹಾರ ನೀಡುತ್ತೇನೆ. ಮೃತರ ಮಕ್ಕಳು ಯಾರು ವಿದ್ಯಾಭ್ಯಾಸ ಮಾಡಿದ್ದಾರೋ ಅವರಿಗೆ ಸರ್ಕಾರಿ ಕೆಲಸ ನೀಡುತ್ತೇವೆ. ಒಂದು ಆಟೋದಲ್ಲಿ 15 -20 ಜನ ತುಂಬಿಕೊಂಡು ಹೋಗೋದು ತಪ್ಪು. ಇವರ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.‌

ತೆಲಗಾಂಣದ ಜಹೀರಾಬಾದ್ ಬಳಿಯ ಮೊಗುಡಂಪಳ್ಳಿ (ಎಂ)ಯ ಸತ್ವಾರ್ ಗ್ರಾಮದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಮಂಗಳವಾರ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದರು.

ಇದನ್ನೂ ಓದಿ: 

ಬೀದರ್ ತಾಲೂಕಿನ ರಾಜಗೀರಾ ಗ್ರಾಮದ ಆರು ಮಂದಿ ಮೃತಪಟ್ಟಿದ್ದಾರೆ. ಕೂಲಿ ಕೆಲಸಕ್ಕೆಂದು ಆಟೋದಲ್ಲಿ ಜಹೀರಾಬಾದ್‌ಗೆ ಮಹಿಳೆಯರು ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಅವಘಡ ಸಂಭವಿಸಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago