ಉಡುಪಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮೃತಪಟ್ಟು , ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕುಂದಾಪುರ ತಾಲೂಕಿನ ಹೊಸ್ಮರ ನಿವಾಸಿ ಕಿರಣ ಶೆಟ್ಟಿ (23) ಹಾಗೂ ಮಲ್ಯಾಡಿ ಮೂಲದ ದೀಕ್ಷಿತ್ ಶೆಟ್ಟಿ (23) ಎಂದು ಗುರುತಿಸಲಾಗಿದೆ, ಗಾಯಗೊಂಡ ಅರುಣ . ಮನೀಷ್ , ಜೀವನ್ ಎಂಬುವವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ
ಕಿರಣ್ ಹಾಗೂ ಸ್ನೇಹಿತರು ಎರಡು ಕಾರುಗಳಲ್ಲಿ ಸಿದ್ದಾಪುರ ಸಮೀಪದ ತೊಂಭಟ್ಟುವಿನ ಜಲಪಾತ ವೀಕ್ಷಿಸಿ ವಾಪಸ್ ಬರುತ್ತಿರುವ ವೇಳೆ ನೆಲ್ಲಿಕಟ್ಟೆಯ ರಾಜ್ಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ದೀಕ್ಷಿತ್ ಸ್ಥಳದಲ್ಲಿಯೇ ಮೃತಪಟ್ಟರೆ ಕಿರಣ್ ಮಣಿಪಾಲಕ್ಕೆ ಕೊಂಡೊಯ್ಯುವ ದಾರಿ ಮಧ್ಯೆ ಅಸು ನೀಗಿದ್ದಾರೆ. ಅಪಘಾತ ತೀವ್ರತೆಗೆ ಕಾರು, ಬಸ್ಸು ಜಖಂಗೊಂಡಿದೆ. ಅಪಘಾತ ನಡೆದಾಗ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿದ್ದಾರೆ. ಚರಂಡಿಗೆ ಬಿದ್ದ ಕಾರನ್ನು ಮೇಲೆತ್ತಿ, ಕಬ್ಬಿಣದ ಸಲಾಕೆ ಬಳಸಿ ಗಾಯಾಳು ಗಳನ್ನು ಕಾರಿನಿಂದ ಕಷ್ಟಪಟ್ಟು ಹೊರ ತೆಗೆದು ಸ್ವಂತ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…