Featured

ಭೀಕರ ಅಪಘಾತ : ಇಬ್ಬರ ದುರ್ಮರಣ ; ಅಪಘಾತ ತೀವ್ರತೆಗೆ ನಜ್ಜುಗುಜ್ಜಾದ ಕಾರು, ಗಾಯಾಳುಗಳ ಹೊರತೆಗೆಯಲು ಸ್ಥಳೀಯರ ಹರಸಾಹಸ

ಉಡುಪಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮೃತಪಟ್ಟು , ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಕುಂದಾಪುರ ತಾಲೂಕಿನ ಹೊಸ್ಮರ ನಿವಾಸಿ ಕಿರಣ ಶೆಟ್ಟಿ (23) ಹಾಗೂ ಮಲ್ಯಾಡಿ ಮೂಲದ ದೀಕ್ಷಿತ್ ಶೆಟ್ಟಿ (23) ಎಂದು ಗುರುತಿಸಲಾಗಿದೆ, ಗಾಯಗೊಂಡ ಅರುಣ . ಮನೀಷ್ , ಜೀವನ್ ಎಂಬುವವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿವರ
ಕಿರಣ್‌ ಹಾಗೂ ಸ್ನೇಹಿತರು ಎರಡು ಕಾರುಗಳಲ್ಲಿ ಸಿದ್ದಾಪುರ ಸಮೀಪದ ತೊಂಭಟ್ಟುವಿನ ಜಲಪಾತ ವೀಕ್ಷಿಸಿ ವಾಪಸ್‌ ಬರುತ್ತಿರುವ ವೇಳೆ  ನೆಲ್ಲಿಕಟ್ಟೆಯ ರಾಜ್ಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ದೀಕ್ಷಿತ್‌ ಸ್ಥಳದಲ್ಲಿಯೇ ಮೃತಪಟ್ಟರೆ ಕಿರಣ್‌ ಮಣಿಪಾಲಕ್ಕೆ ಕೊಂಡೊಯ್ಯುವ ದಾರಿ ಮಧ್ಯೆ ಅಸು ನೀಗಿದ್ದಾರೆ. ಅಪಘಾತ ತೀವ್ರತೆಗೆ ಕಾರು, ಬಸ್ಸು ಜಖಂಗೊಂಡಿದೆ.  ಅಪಘಾತ ನಡೆದಾಗ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿದ್ದಾರೆ. ಚರಂಡಿಗೆ ಬಿದ್ದ ಕಾರನ್ನು ಮೇಲೆತ್ತಿ, ಕಬ್ಬಿಣದ ಸಲಾಕೆ ಬಳಸಿ ಗಾಯಾಳು ಗಳನ್ನು ಕಾರಿನಿಂದ ಕಷ್ಟಪಟ್ಟು ಹೊರ ತೆಗೆದು ಸ್ವಂತ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

8 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago